ಚನ್ನರಾಯಪಟ್ಟಣದ ನಾಲ್ವರನ್ನು ಬಂಧಿಸಿದ ಸಿಐಡಿ

ಚನ್ನರಾಯಪಟ್ಟಣ, ಮೇ ೯: ಪಿಎಸ್‌ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬAಧಿಸಿದAತೆ ಚನ್ನರಾಯಪಟ್ಟಣ ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷ, ಮಾಜಿ ಅಧ್ಯಕ್ಷ ಸೇರಿ ನಾಲ್ವರನ್ನು ಅಪರಾಧ ತನಿಖಾ ದಳ (ಸಿಐಡಿ) ಬಂಧಿಸಿದೆ. ಐವರು ಸದಸ್ಯರ ಸಿಐಡಿ ತಂಡವು ಪಿಎಸ್‌ಐ ಅಭ್ಯರ್ಥಿಗಳಾದ ಚಂದ್ರಶೇಖರ್ ಅವರ ಪುತ್ರ ವೆಂಕಟೇಶ್ ಮತ್ತು ಕೇಶವಮೂರ್ತಿ ಅವರ ಪುತ್ರ ವೇಣುಗೋಪಾಲ್‌ರನ್ನು ಅರ್ಧ ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಬಂಧಿಸಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ್ ಮತ್ತು ಕೇಶವಮೂರ್ತಿ ಹಾಲಿ ಅಧ್ಯಕ್ಷರಾಗಿದ್ದಾರೆ. ಇದೇ ವೇಳೆ ಚನ್ನರಾಯಪಟ್ಟಣ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಶಶಿಧರ್ ಎಂಬಾತನನ್ನೂ ಸಿಐಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂಬAಧ ಮಧ್ಯವರ್ತಿಗಳಾಗಿದ್ದ ಚನ್ನರಾಯಪಟ್ಟಣದ ನಾರಾಯಣಪ್ಪ ಸೇರಿದಂತೆ ಮತ್ತಿಬ್ಬರಿಗೆ ಸಿಐಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಪಿಎಸ್‌ಐ ಹುದ್ದೆಯ ಕನಸು ಕಂಡಿರುವ ವೆಂಕಟೇಶ್ ಮತ್ತು ವೇಣುಗೋಪಾಲ್ ಅವರಿಂದ ಸಿಐಡಿ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

ಗುಂಡಿಟ್ಟು ಸ್ವತಃ ಗುಂಡು ಹಾರಿಸಿಕೊಂಡು ಸಂಸದ ಸಾವು

ಕೊಲಂಬೊ, ಮೇ ೯: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾ ಪ್ರತಿಭಟನೆಯ ಕಿಚ್ಚಲ್ಲಿ ಬೇಯುತ್ತಿದೆ. ಮಹಿಂದಾ ರಾಜಪಕ್ಸೆ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತೆ ಪ್ರತಿಭಟನೆಗಳು ಜೋರಾಗಿವೆ. ಸರಕಾರದ ನಿಷ್ಠಾವಂತರು ಮತ್ತು ಸರ್ಕಾರ ವಿರೋಧಿ ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದರೊಬ್ಬರು ಸಾವನ್ನಪ್ಪಿದ್ದು ಹಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಸಂಸದ ಅಮರಕೀರ್ತಿ ಆತುಕೋರಲ ತೆರಳುತ್ತಿದ್ದಾಗ ನಿಟ್ಟಂಬುವದಲ್ಲಿ ಅವರ ಕಾರನ್ನು ಪ್ರತಿಭಟನಾಕಾರರ ಗುಂಪೊAದು ತಡೆದು ನಂತರ ಗುಂಡು ಹಾರಿಸಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ನಂತರ ಸಾವನ್ನಪ್ಪಿದ್ದಾರೆ. ಇನ್ನು ಸಂಸದರು ತಮ್ಮ ಪಿಸ್ತೂಲ್‌ನಿಂದ ಪ್ರತಿಭಟನಾಕಾರನ ಮೇಲೆ ಗುಂಡು ಹಾರಿಸಿ ನಂತರ ತಾವು ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೌಡ್‌ಸ್ಪೀಕರ್ ಬಳಕೆಗೆ ಶೀಘ್ರ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು, ಮೇ ೯: ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಆಜಾನ್-ಭಜನೆ ಸಂಘರ್ಷದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್‌ಸ್ಪೀಕರ್ ಬಳಕೆಗೆ ಸಂಬAಧಿಸಿದAತೆ ಶೀಘ್ರ ಮಾರ್ಗಸೂಚಿ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಜಾನ್-ಭಜನೆ ಸಂಘರ್ಷದ ಬಗ್ಗೆ ಸೋಮವಾರ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಡಿಜಿ ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಸಿಎಂ, ಅಧಿಕಾರಿಗಳಿಗೆ ಹೈಕೋರ್ಟ್, ಸುಪ್ರೀಂಕೋರ್ಟ್ ಆದೇಶವನ್ನ ಪಾಲಿಸುವಂತೆ ಸೂಚನೆ ನೀಡಿದರು. ಅಲ್ಲದೆ ಈ ಬಗ್ಗೆ ಮಾರ್ಗಸೂಚಿ ಹೊರಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.