ಸೋಮವಾರಪೇಟೆ, ಮೇ ೯: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸ ಲಾಗಿದ್ದರೂ ಹಲವಷ್ಟು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ನಿರಾತಂಕವಾಗಿ ಸಾಗಿರುವ ಹಿನ್ನೆಲೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ, ಅಂಗಡಿ ಮಾಲೀಕರಿಗೆ ದಂಡ ವಿಧಿಸಿದರು.
ಪಟ್ಟಣ ವ್ಯಾಪ್ತಿಯ ಕಕ್ಕೆಹೊಳೆ ಜಂಕ್ಷನ್ ಸೇರಿದಂತೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿದ ಅಧಿಕಾರಿಗಳ ತಂಡ, ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಮಾಲೀಕರಿಗೆ ದಂಡ ವಿಧಿಸಿದರು. ಸುಮಾರು ೨೦ ಕ್ಕೂ ಅಧಿಕ ಅಂಗಡಿ ಮಾಲೀಕರಿಂದ ೩,೫೦೦ ರೂಪಾಯಿ ದಂಡ ವಸೂಲಿ ಮಾಡಿದರು.
ಈ ಸಂದರ್ಭ ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯ ನಿರೀಕ್ಷಕ ಖಾಸಿಂ ಖಾನ್, ಸಿಬ್ಬಂದಿಗಳಾದ ಆದಿಲ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.