ಮಡಿಕೇರಿ, ಮೇ ೧೦ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ವಾಸ್ತವ್ಯ ಇರುವ ಮಾಜಿ ಸೈನಿಕರು ಮತ್ತು ಅವರ ಅವಲಂಭಿತರು, ಅವರುಗಳ ಯಾವುದೇ ಸಾಮೂಹಿಕ ಅಥವಾ ವೈಯಕ್ತಿಕ ಕುಂದುಕೊರತೆಗಳು ಇದ್ದಲ್ಲಿ ಅವುಗಳ ಬಗ್ಗೆ ಚರ್ಚಿಸಲು, ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ತಾ. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ಸೋಮವಾರಪೇಟೆ ತಹಶೀಲ್ದಾರರ ಕಾರ್ಯಾಲಯ ಸಭಾಂಗಣದಲ್ಲಿ ಮಾಜಿ ಸೈನಿಕರ ಕುಂದುಕೊರತೆಗಳ ಸಭೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ತಾ. ೨೧ ರೊಳಗೆ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಪತ್ರ ಅಥವಾ ಮಿಂಚAಚೆ ಮೂಲಕ (ಇ-ಮೇಲ್: ರಿಣಜiಡಿeಛಿಣoಡಿಜsತಿಡಿmಜಞ@ಥಿಚಿhoo.ಛಿom ಮೂಲಕ ತಮ್ಮ ಕುಂದುಕೊರತೆಯ ಅರ್ಜಿಗಳನ್ನು, ಜೊತೆಗೆ ದಾಖಲಾತಿಗಳನ್ನು ಸಲ್ಲಿಸಲು ಕೋರಿದೆ. ಕುಂದುಕೊರತೆ ಸಲ್ಲಿಸುವಾಗ ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿ ಪ್ರತಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.