ವೀರಾಜಪೇಟೆ, ಮೇ ೧೧: ವೀರಾಜಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಅಕ್ರಮವಾಗಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಎಂಟು ಅಂಗಡಿಗಳ ಮೇಲೆ ದಾಳಿ ನಡೆಸಿ ರೂ. ೩೦೦೦ ದಂಡ ವಸೂಲಿ ಮಾಡಲಾಗಿದೆ.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ. ಚಂದ್ರಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು ಪಟ್ಟಣದ ವಿವಿಧ ಅಂಗಡಿಗಳ ಮುಂದೆ ಪ್ಲಾಸ್ಟಿಕ್ ನಿಷೇಧಕ್ಕೆ ಸಂಬAಧಿಸಿದAತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಬ್ಯಾನರ್ಗಳನ್ನು ಇದೇ ಸಂದರ್ಭ ಅಳವಡಿಸಲಾಯಿತು ಎಂದು ಚಂದ್ರಕುಮಾರ್ ತಿಳಿಸಿದ್ದಾರೆ. ದಾಳಿಯಲ್ಲಿ ಪಟ್ಟಣ ಪಂಚಾಯಿತಿ ಆರೋಗ್ಯ ವಿಭಾಗದ ಕೋಮಲ, ಸಿಬ್ಬಂದಿಗಳು ಭಾಗವಹಿಸಿದ್ದರು.