ಸೋಮವಾರಪೇಟೆ, ಮೇ ೧೦: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳುತ್ತಿದ್ದು, ತಾಲೂಕಿನ ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಸಹಿತ ೨೦ಕ್ಕೂ ಅಧಿಕ ಕಾರ್ಯಕರ್ತರು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು.
ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಉಪಸ್ಥಿತಿಯಲ್ಲಿ, ಯುವಕ ಸಂಘದ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಕಾಂಗ್ರೆಸ್ ಬೆಂಬಲಿತರಾಗಿದ್ದ ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್‌ಕುಮಾರ್, ವಿವಿಧ ಪಕ್ಷಗಳ ಕಾರ್ಯಕರ್ತರಾದ ಅಂಬಳ್ಳಿ ಶರತ್, ಸೀಗೇಮರೂರು ಉಮೇಶ್, ದೇವರಾಜ್, ರಾಜು, ಲಕ್ಷö್ಮಣ್, ರಕ್ಷಿತ್, ಆನಂದ್, ಪ್ರಕಾಶ್, ಬಸವಲಿಂಗಪ್ಪ, ವಿಶ್ವೇಶ್ವರಪ್ಪ, ಲಿಂಗರಾಜು, ವಸಂತ್, ಸಂಪತ್, ರಾಕೇಶ್, ಬಾಬು, ಪುಟ್ಟಶೆಟ್ಟಿ ಸೇರಿದಂತೆ ಇತರರು ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಜಯಕುಮಾರ್, ತಾ.ಪಂ. ಮಾಜಿ ಉಪಾಧ್ಯಕ್ಷೆ ನೇತ್ರಾವತಿ, ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಗಂಗಾಧರ್, ಗ್ರಾ.ಪಂ. ಉಪಾಧ್ಯಕ್ಷೆ ದಮಯಂತಿ, ಸದಸ್ಯ ಕಿರಣ್, ಲೀಲಮ್ಮ, ಜಯಂತಿ, ಬಿಜೆಪಿ ಸೋಮವಾರಪೇಟೆ ಪಟ್ಟಣ ಅಧ್ಯಕ್ಷ ಎಸ್.ಆರ್. ಸೋಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.