ಮಡಿಕೇರಿ, ಮೇ ೧೦: ಮಂಡ್ಯದ ಜಿಲ್ಲಾ ಯುವ ಬರಹಗಾರರ ಬಳಗ ಹಾಗೂ ನಾಗಮಂಗಲದ ಹಾರ್ಟ್ ಟ್ರಸ್ಟ್ ವತಿಯಿಂದ ನೀಡಲಾಗುವ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿ’ಗೆ ಮಡಿಕೇರಿ ಉಪವಿಭಾಗದ ಪೊಲೀಸ್ ಉಪಾದೀಕ್ಷಕರಾದ ಜಿ.ಎಸ್. ಗಜೇಂದ್ರ ಪ್ರಸಾದ್ ಅವರು ಆಯ್ಕೆಯಾಗಿದ್ದಾರೆ ಎಂದು ಬಳಗದ ಸಂಸ್ಥಾಪಕ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ತಿಳಿಸಿದ್ದಾರೆ.

ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೊಟ್ಟೀಕೆರೆ ಗ್ರಾಮದವರಾದ ಜಿ.ಎಸ್. ಗಜೇಂದ್ರ ಪ್ರಸ್ತುತ ಮಡಿಕೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ತಾ. ೧೫ ರಂದು ನಾಗಮಂಗಲದ ಕುವೆಂಪು ಶಾಲೆಯ ಸಭಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕವಿಕಾವ್ಯ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಪ್ರಸಿದ್ಧ ಜಾನಪದ ವಿದ್ವಾಂಸರಾದ ಡಾ. ಡಿ.ಕೆ. ರಾಜೇಂದ್ರ, ರಾಜ್ಯ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷ ಹೆಚ್.ಕೆ. ರಾಮು ಮತ್ತು ಮೈಸೂರು ಕಂದಾಯ ವಿಭಾಗದ ಪ್ರಾದೇಶಿಕ ಹೆಚ್ಚುವರಿ ಆಯುಕ್ತ ಪಿ. ಶಿವರಾಜು ಪೂರಿಗಾಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.