ಮಡಿಕೇರಿ, ಮೇ ೧೧: ಬೆಳೆಗಾರರು ಅತಿಕ್ರಮಣ ಮಾಡಿಕೊಂಡಿರುವ ಸರಕಾರಿ ಜಮೀನನ್ನು ಗುತ್ತಿಗೆ ಆಧಾರದಲ್ಲಿ ಬೆಳೆಗಾರರಿಗೆ ನೀಡುವ ಬದಲು ಭೂರಹಿತ ಬಡವರಿಗೆ ಹಂಚಿಕೆ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದ ಸಮಿತಿಯ ಪ್ರಮುಖರು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ಸರಕಾರಿ ಜಮೀನು ನೀಡುವ ಕ್ರಮ ಖಂಡನೀಯವೆAದು ತಿಳಿಸಿದರು.

ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಆರ್.ಪರಶುರಾಮ್ ಮಾತನಾಡಿ ಕೊಡಗಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಗೂ ಹಿಂದುಳಿದ ವರ್ಗದ ಸಾವಿರಾರು ಮಂದಿ ಸ್ವಂತ ನಿವೇಶನ ಮತ್ತು ಮೂಲಭೂತ ಸೌಕರ್ಯಗಳಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ನೈಜ ಬಡವರ ಬಗ್ಗೆ ಕಾಳಜಿ ತೋರದ ಸರಕಾರ ಪೈಸಾರಿ ಜಾಗವನ್ನು ಬೆಳೆಗಾರರಿಗೆ ಗುತ್ತಿಗೆಗೆ ನೀಡುತ್ತಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರುಗಳಾದÀ ವಿ.ಆರ್. ರಜನಿಕಾಂತ್, ಹೆಚ್.ಎನ್. ಯೋಗೇಶ್ ಕುಮಾರ್, ರಾಜ್ಯ ಸಮಿತಿ ಸದಸ್ಯ ಟಿ.ಎನ್. ಗೋವಿಂದಪ್ಪ, ಜಿಲ್ಲಾ ಸಂಚಾಲಕ ಎಂ.ಎಸ್. ವಿರೇಂದ್ರ, ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ಪ್ರೇಮ ವಸಂತ, ಗೋಣಿಕೊಪ್ಪ ತಾಲೂಕು ಸಂಘಟನಾ ಸಂಚಾಲಕ ಎಂ.ಜಿ. ಮಂಜು, ಮಡಿಕೇರಿ ತಾಲೂಕು ಸಂಚಾಲಕ ಪಿ.ಕೆ. ತಿಮ್ಮಪ್ಪ ಹಾಗೂ ಮಡಿಕೇರಿ ತಾಲೂಕು ಸಂಘಟನಾ ಸಂಚಾಲಕ ಹೆಚ್.ಜಿ. ರಾಚಯ್ಯ ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.