ಸೋಮವಾರಪೇಟೆ, ಮೇ ೧೦: ಪಟ್ಟಣ ಪಂಚಾಯಿತಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‌ದಯಾಳ್ ಅಂತ್ಯೋದಯ ಯೋಜನೆ, ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಡಿ (ಡೇ-ನಲ್ಮ್) ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು. ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಪಟ್ಟಣ ಪಂಚಾಯಿತಿಯಲ್ಲಿ ಡೇ-ನಲ್ಮ್ ವಿಭಾಗದಲ್ಲಿ ಸಂಪರ್ಕಿಸಿ ದೃಡೀಕೃತ ದಾಖಲೆಗಳೊಂದಿಗೆ ತಾ. ೨೧ ರೊಳಗೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ವಯೋಮಿತಿ ೧೮ ರಿಂದ ೪೫ ವರ್ಷ, ಕನಿಷ್ಟ ಪಿ.ಯು.ಸಿ. ತೇರ್ಗಡೆಯಾಗಿರಬೇಕು.
ಸ್ವ-ಸಹಾಯ ಸಂಘದಲ್ಲಿ ಕನಿಷ್ಟ ಮೂರು ವರ್ಷದಿಂದ ಸದಸ್ಯರಾಗಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಲಗತ್ತಿಸುವುದು). ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಯವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.