ಮಡಿಕೇರಿ, ಮೇ ೧೨: ಕೊಡಗು ಜಿಲ್ಲಾ ಪಂಚಾಯತ್ ವತಿಯಿಂದ ಕೊಡಗು ಜಿಲ್ಲಾ ಸಂಪನ್ಮೂಲ ಕೇಂದ್ರ ಉದ್ಘಾಟನಾ ಸಮಾರಂಭವು ತಾ. ೧೩ ರಂದು (ಇಂದು) ಬೆಳಗ್ಗೆ ೧೧ ಗಂಟೆಗೆ ಜಿ.ಪಂ. ಕಟ್ಟಡದ ಸಮೀಪದ ಕೊಡಗು ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ನಡೆಯಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಉದ್ಘಾಟಿಸಲಿದ್ದಾರೆ. ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ರವಿಕುಶಾಲಪ್ಪ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.