ಮಡಿಕೇರಿ, ಮೇ ೧೨: ಪ್ರಸಕ್ತ (೨೦೨೨-೨೩) ಸಾಲಿನ ಕೃಷಿ ಇಲಾಖೆಯ ರಾಜ್ಯ ಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರವು ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ತಾ. ೧೩ ಮತ್ತು ೧೪ ರಂದು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಶ್ವವಿದ್ಯಾಲಯದ ಡಾ. ಬಾಬು ರಾಜೇಂದ್ರ ಪ್ರಸಾದ್ ಇಂಟರ್‌ನ್ಯಾಷನಲ್ ಕನ್ವೆಷನ್ ಸಭಾಂಗಣದಲ್ಲಿ ನಡೆಯಲಿದೆ.

ತಾ. ೧೩ರಂದು ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಉದ್ಘಾಟಿಸಲಿದ್ದಾರೆ. ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ್, ಕೃಷಿ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತÀ ಡಾ. ಎಂ.ವಿ. ವೆಂಕಟೇಶ್, ಅಪರ ಕೃಷಿ ನಿರ್ದೇಶಕ ಬಿ.ಶಿವರಾಜು ಇತರರು ಪಾಲ್ಗೊಳ್ಳಲಿದ್ದಾರೆ.