ಮಡಿಕೇರಿ, ಮೇ ೧೨: ಧ್ವನಿವರ್ಧಕ ಬಳಕೆಗೆ ಸಂಬAಧಿಸಿದAತೆ ಸರಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅನುಮತಿ ಪಡೆಯಲು ೧೫ ದಿನಗಳ ಕಾಲಾವಕಾಶವನ್ನು ನೀಡಿದೆ. ಜಿಲ್ಲೆಯ ಎಲ್ಲಾ ಮಸೀದಿಗಳ ಧರ್ಮಗುರುಗಳು ಜಮಾಅತ್ ಅಧ್ಯಕ್ಷರುಗಳಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟು ಅನುಮತಿ ಪಡೆಯಲು ಸಲಹೆ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಮನವಿ ಮಾಡಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಸೀದಿ, ಚರ್ಚ್, ದೇವಸ್ಥಾನ ಸೇರಿದಂತೆ ಯಾವುದೇ ಸ್ಥಳದಲ್ಲಿ ಧ್ವನಿವರ್ಧಕ ಬಳಕೆಯಲ್ಲಿ ನಿಯಮ ಉಲ್ಲಂಘನೆಯಾಗಬಾರದೆAದು ಸರಕಾರ ತಿಳಿಸಿದೆ. ಇದನ್ನು ಎಲ್ಲರೂ ಪಾಲಿಸುವ ಮೂಲಕ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.