ಸಿದ್ದಾಪುರ, ಮೇ ೧೨: ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಅಭ್ಯತ್‌ಮಂಗಲ ಗ್ರಾಮದಲ್ಲಿ ಇದೀಗ ಕಾಡು ಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದು, ಕಾರ್ಮಿಕರು ಭಯಭೀತರಾಗಿದ್ದಾರೆ. ಅಭ್ಯತ್‌ಮಂಗಲ ಗ್ರಾಮದ ಗ್ರೀನ್ ಫೀಲ್ಡ್ ಕಾಫಿ ತೋಟದಲ್ಲಿ ಹದಿನೈದಕ್ಕೂ ಅಧಿಕ ಕಾಡುಕೋಣಗಳು ಪ್ರತ್ಯಕ್ಷಗೊಂಡಿವೆ. ಕಾಫಿ ತೋಟದ ಒಳ ಭಾಗದಲ್ಲಿ ಏಕಾಏಕಿ ಕಾಡುಕೋಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ ಕಾಫಿ ತೋಟ ಕೆಲಸಕ್ಕೆ ಗೈರುಹಾಜರಾಗಿದ್ದಾರೆ. ಈ ನಡುವೆ ನೆಲ್ಲಿಹುದಿಕೇರಿ ಗ್ರಾಮದ ಅತ್ತಿಮಂಗಲ ಹಾಗೂ ಮೇರಿಲ್ಯಾಂಡ್ ಕಾಫಿ
(ಮೊದಲ ಪುಟದಿಂದ) ತೋಟಗಳಲ್ಲಿ ಬೀಡುಬಿಟ್ಟಿದ್ದ ೧೫ಕ್ಕೂ ಅಧಿಕ ಕಾಡಾನೆಗಳನ್ನು ಕುಶಾಲನಗರ ವಲಯ ಅರಣ್ಯ ಅಧಿಕಾರಿ ಶಿವರಾಂ ಮತ್ತು ಉಪ ವಲಯ ಅರಣ್ಯ ಅಧಿಕಾರಿ ಸುಬ್ರಾಯ ನೇತೃತ್ವದಲ್ಲಿ ಸಿಬ್ಬಂದಿಗಳೊAದಿಗೆ ಎರಡು ದಿನಗಳ ಕಾಲ ಕಾರ್ಯಾಚರಣೆ ನಡೆಸಿ ದುಬಾರೆ ಮೀಸಲು ಅರಣ್ಯಕ್ಕೆ ಅಟ್ಟಲಾಗಿತ್ತಾದರೂ, ಬುಧವಾರದಂದು ಕಾಡಿಗೆ ತೆರಳಿದ್ದ ಕಾಡಾನೆಗಳ ಹಿಂಡಿನ ಪೈಕಿ ಕೆಲವು ಕಾಡಾನೆಗಳು ರಾತ್ರಿ ಸಮಯದಲ್ಲಿ ಹಿಂತಿರುಗಿ ಕಾಫಿ ತೋಟಗಳಿಗೆ ಲಗ್ಗೆಯಿಟ್ಟು ದಾಂಧಲೆ ನಡೆಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಲ್ಲದೆ ಕೃಷಿ ಫಸಲುಗಳನ್ನು ನಾಶಗೊಳಿಸಿವೆ ಎಂದು ಇಲಾಖೆಗೆ ದೂರು ನೀಡಿದ್ದಾರೆ. ಕಾಡಾನೆಗಳ ಹಾವಳಿ ನಡುವೆ ಇದೀಗ ಕಾಡುಕೋಣಗಳ ಹಿಂಡು ಕಂಡುಬAದಿದ್ದು ಮತ್ತಷ್ಟು ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ಕುಶಾಲನಗರ ಮೀನುಕೊಲ್ಲಿ ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. -ವಾಸು ಎ.ಎನ್