ಸೋಮವಾರಪೇಟೆ, ಮೇ ೧೨: ಇಲ್ಲಿಗೆ ಸಮೀಪದ ಕೋಟೆಯೂರು ಗ್ರಾಮದ ಶ್ರೀ ಜೋಡಿ ಬಸವೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಗೌಡಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋಟೆಯೂರು ಗ್ರಾಮದ ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಜೋಡಿ ಬಸವೇಶ್ವರ ದೇವಾಲಯ ಶಿಥಿಲಾವಸ್ಥೆಗೆ ತಲುಪಿದ್ದು ನೂತನ ದೇವಾಲಯ ನಿರ್ಮಾಣ ಕಾರ್ಯಕ್ಕೆ ತಪೋವನಕ್ಷೇತ್ರ ಮನೆಹಳ್ಳಿ ಮಠಾಧೀಶರಾದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಗ್ರಾಮಸ್ಥರು, ಗಂಗಾಪೂಜೆಯೊAದಿಗೆ ಚಾಲನೆ ನೀಡಿದರು. ಈ ಸಂದರ್ಭ ಅಧ್ಯಕ್ಷರಾದ ಲೋಹಿತ್, ಗ್ರಾಮ ಪಂಚಾಯಿತಿ ಸದಸ್ಯರಾದ ನವೀನ್ ಅಜ್ಜಳ್ಳಿ, ನಾಗರಾಜು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.