ಸೋಮವಾರಪೇಟೆ, ಮೇ ೧೨: ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಭಂಡಾರ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀಮಲ್ಲೇಶ್ವರ ದೇವಾಲಯಕ್ಕೆ ಶಾಸಕರ ನಿಧಿಯಿಂದ ರೂ. ೫ ಲಕ್ಷ ಅನುದಾನ ನೀಡುವುದಾಗಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭರವಸೆ ನೀಡಿದರು.

ಗ್ರಾಮಕ್ಕೆ ಭೇಟಿ ನೀಡಿದ ಶಾಸಕರನ್ನು ದೇವಾಲಯ ನಿರ್ಮಾಣ ಸಮಿತಿಯ ಪದಾಧಿಕಾರಿಗಳು ಭೇಟಿ ಮಾಡಿ, ದೇವಾಲಯಕ್ಕೆ ಅನುದಾನ ಕಲ್ಪಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಶಾಸಕರು, ಮುಂದಿನ ಒಂದು ತಿಂಗಳೊಳಗೆ ೫ಲಕ್ಷ ಅನುದಾನ ನೀಡುವುದಾಗಿ ತಿಳಿಸಿದರು. ದೇವಾಲಯ ಸಮಿತಿ ಕಾರ್ಯದರ್ಶಿ ಶೇಷೇಗೌಡ ಮಾತನಾಡಿ, ಕಳೆದ ೪೦ ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದ ಮಲ್ಲೇಶ್ವರ ದೇವಾಲಯ ಜೀರ್ಣೋದ್ಧಾರ ಕಾರ್ಯವನ್ನು ಗ್ರಾಮಸ್ಥರು ಹಾಗೂ ದಾನಿಗಳ ನೆರವಿನಿಂದ ಕೈಗೊಂಡಿದ್ದು, ಈವರೆಗೆ ಸರ್ಕಾರದಿಂದ ಯಾವುದೇ ಅನುದಾನ ಲಭಿಸಿಲ್ಲ. ಗ್ರಾಮದ ಪ್ರತಿ ಕುಟುಂಬದಿAದಲೂ ವಂತಿಗೆ ಸಂಗ್ರಹಿಸಿ ದೇವಾಲಯ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕರ ಗಮನ ಸೆಳೆದರು.

ಇತ್ತೀಚಿನ ವರ್ಷಗಳಲ್ಲಿ ಕೊಡಗಿನ ಪ್ರತಿ ಗ್ರಾಮಗಳಲ್ಲೂ ದೇವಾಲಯ ನಿರ್ಮಾಣವಾಗುತ್ತಿದೆ. ಗ್ರಾಮದ ದೇವಾಲಯಗಳನ್ನು ಕಾಡುಬಿಡಬಾರದು. ಧಾರ್ಮಿಕ ಜಾಗೃತಿ ಮತ್ತು ಮಾನಸಿಕ ನೆಮ್ಮದಿಗೆ ದೇವಾಲಯಗಳು ಹಾಗೂ ಜ್ಞಾನಾರ್ಜನೆಗೆ ಶಾಲೆಗಳು ಮುಖ್ಯವಾಗಿದ್ದು, ಇವುಗಳನ್ನು ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅನುದಾನ ಒದಗಿಸುವುದಾಗಿ ಶಾಸಕರು ತಿಳಿಸಿದರು. ಇದೇ ಸಂದರ್ಭ ಸಮಿತಿಯ ವತಿಯಿಂದ ಶಾಸಕರನ್ನು ಅಭಿನಂದಿಸಲಾಯಿತು.

ಈ ಸಂದರ್ಭ ದೇವಾಲಯ ಸಮಿತಿ ಉಪಾಧ್ಯಕ್ಷ ಜವರೇಗೌಡ, ಚಂದ್ರೇಗೌಡ, ಅಶೋಕ್, ಪಟೇಲ್ ಮಂಜುನಾಥ್, ಸ್ತಿçà ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.