ಸೋಮವಾರಪೇಟೆ, ಮೇ ೧೨: ತಾಲೂಕಿನ ದೊಡ್ಡಭಂಡಾರ ಗ್ರಾಮದಲ್ಲಿ ನೂತನವಾಗಿ ೧೭ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಅಂಗನವಾಡಿ ಕೇಂದ್ರವನ್ನು ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಿದರು.
ನಬಾರ್ಡ್ ಆರ್ಐಡಿಎಫ್ ಅನುದಾನದಡಿ ಲೋಕೋಪಯೋಗಿ ಇಲಾಖೆ ವತಿಯಿಂದ ೧೭ ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿದ್ದು, ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕರು ಅಭಿಪ್ರಾಯಿಸಿದರು.
ಈ ಸಂದರ್ಭ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ, ಜಿ.ಪಂ. ಅಭಿಯಂತರ ವೀರೇಂದ್ರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಪ್ರಮುಖರಾದ ಜವರೇಗೌಡ, ಚಂದ್ರೇಗೌಡ, ಶೇಷೇಗೌಡ, ಪುರುಷೋತ್ತಮ್, ಮಂಜುನಾಥ್, ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.