ಮಡಿಕೇರಿ, ಮೇ ೧೨: ಕೊಡಗು ಜಿಲ್ಲೆಯಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೧-೨೨ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ಮತ್ತು ವಿದ್ಯಾಸಿರಿ ಯೋಜನೆ ಸೌಲಭ್ಯಕ್ಕಾಗಿ” ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಡಿಕಲ್ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಮೆಡಿಕಲ್ ಕೋರ್ಸುಗಳಿಗೆ ಮಾತ್ರ ಅರ್ಜಿ ಸಲ್ಲಿಸುವ ದಿನಾಂಕವನ್ನು ತಾ. ೩೧ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: ತಿತಿತಿ.ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯ ಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯ ಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಭೇಟಿ ನೀಡಬೇಕಾದ ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿ. ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡ ಬಹುದು. ಸಂಪರ್ಕಿಸ ಬಹುದಾದ ಇಲಾಖಾ ಸಹಾಯ ವಾಣಿ ಸಂಖ್ಯೆ: ೮೦೫೦೭೭೦೦೦೫/ ೮೦೫೦೭೭೦೦೦೪ ಇ-ಮೇಲ್ bಛಿತಿಜ.sಛಿhoಟಚಿಡಿshiಠಿ @ಞಚಿಡಿಟಿಚಿಣಚಿಞಚಿ.gov.iಟಿ, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ @ ಞಚಿಡಿಟಿಚಿಣಚಿಞಚಿ.gov.iಟಿ ದೂರ ವಾಣಿ ಸಂಖ್ಯೆ: ೦೮೦-೩೫೨೫೪೭೫೭ ನ್ನು ಸಂಪ ರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.