ಮಡಿಕೇರಿ, ಮೇ ೧೨: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನಿಷ್ಟ ಶೇ. ೪೦ ರಷ್ಟು ಅಂಕಗಳಿAದ ತೇರ್ಗಡೆಯಾದ ಸಾಮಾನ್ಯ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಶೇ. ೩೫ ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಸರ್ಕಾರ, ಸಾರ್ವಜನಿಕ ಗ್ರಂಥಾಲಯ ಇಲಾಖಾ ವತಿಯಿಂದ ನಗರ ಕೇಂದ್ರ ಗ್ರಂಥಾಲಯ, ಮಂಗಳೂರಿನಲ್ಲಿ ನಾಲ್ಕು ತಿಂಗಳ ಅವಧಿಯ ಸರ್ಟಿಫಿಕೇಟ್ ಇನ್ ಲೈಬ್ರೆರಿ ಸೈನ್ಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಇಲಾಖೆಯ ‘ಡಿ’ ದರ್ಜೆಯ ಗ್ರಂಥಾಲಯ ಸಹವರ್ತಿಗಳು ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿರುವ ಸಂಬAಧಪಟ್ಟ ಉಪ ನಿರ್ದೇಶಕರು/ ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಯಿAದ ಬರುವ ಅಭ್ಯರ್ಥಿಗಳು ಸಂಸ್ಥೆಯ ಮುಖ್ಯಸ್ಥರ ಮೂಲಕ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ವಯಸ್ಸು ಸರ್ಕಾರದ ನಿಯಮಾವಳಿಯಲ್ಲಿ ನಿಗದಿಪಡಿಸಿದಂತೆ.

ಆಸಕ್ತರು ರೂ.೨೦ ಅರ್ಜಿ ಶುಲ್ಕವನ್ನು ನೀಡಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ಅವಶ್ಯಕ ದಾಖಲಾತಿಗಳೊಂದಿಗೆ ತಾ. ೨೫ ರ ಸಂಜೆ ೫ ಗಂಟೆಯೊಳಗೆ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಪಡೆಯಲು ಮತ್ತು ಅರ್ಜಿಯ ಜೊತೆಗೆ ಲಗತ್ತಿಸಬಹುದಾದ ದಾಖಲಾತಿಗಳ ಬಗ್ಗೆ, ತರಬೇತಿ ಸಂಸ್ಥೆಗಳಲ್ಲಿ ಸೀಟುಗಳ ಮೀಸಲಾತಿ ಬಗ್ಗೆ ಹಾಗೂ ಇತರೆ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು ೫೭೫೦೦೩, ದೂ. ೦೮೨೪-೨೪೨೫೮೭೩ ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ತಿಳಿಸಿದ್ದಾರೆ.