ಮಡಿಕೇರಿ, ಮೇ ೧೨ : ಮಳೆಗಾಲದಲ್ಲಿ ಡೆಂಗಿ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಂತರ್ ಇಲಾಖೆಗಳ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಳೆಗಾಲದ ಸಂದರ್ಭದಲ್ಲಿ ಸೊಳ್ಳೆಗಳಿಂದ ಹಲವು ರೀತಿಯ ಸಾಂಕ್ರಾಮಿಕ ರೋಗಗಳು ಬರುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಮಾಜ ಕಲ್ಯಾಣ, ಮೀನುಗಾರಿಕೆ, ಕೈಗಾರಿಕೆ, ನೀರಾವರಿ, ಕಂದಾಯ, ಹೀಗೆ ಹಲವು ಇಲಾಖೆಗಳು ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಸೇರಿ ಅರಿವು ಮೂಡಿಸುವುದರ ಜೊತೆಗೆ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಮೇ, ೧೬ ರಂದು ರಾಷ್ಟಿçÃಯ ಡೆಂಗಿ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಜೂನ್ ತಿಂಗಳಲ್ಲಿ ಮಲೇರಿಯಾ ವಿರೋಧ ದಿನಾಚರಣೆ ಆಚರಿಸಲಾಗುತ್ತಿದ್ದು, ಜುಲೈ ತಿಂಗಳಲ್ಲಿ ಡೆಂಗಿ ವಿರೋಧಿ ಮಾಸಾಚರಣೆ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಕಳೆದ ನಾಲ್ಕು ತಿಂಗಳಲ್ಲಿ (ಜನವರಿಯಿಂದ ಏಪ್ರಿಲ್ ವರೆಗೆ) ಡೆಂಗ್ಯು ಜ್ವರದಿಂದ ಇಬ್ಬರು, ಮಲೇರಿಯಾದಿಂದ ಇಬ್ಬರು, ವಿಷಮಶೀತ ಜ್ವರದಿಂದ ೭ ಮಂದಿ, ಡಯೇರಿಯಾದಿಂದ ೧೦೩೧ ಮಂದಿ, ನಾಯಿ ಕಡಿತದಿಂದ ೨,೨೨೩ ಮಂದಿ, ಹಾವು ಕಡಿತದಿಂದ ೧೩೧, ಮತ್ತು ಇಲಿ ಜ್ವರದಿಂದ ನಾಲ್ಕು ಮಂದಿ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿದ್ದು, ಯಾವುದೇ ರೀತಿಯ ಮರಣ ಸಂಭವಿಸಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದರು.
ಹಾಗೆಯೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಮೂಲಗಳ ಜೈವಿಕ ವಿಶ್ಲೇಷಣೆ ವರದಿ ಮಾಡಲಾಗುತ್ತಿದ್ದು, ಸುಮಾರು ೩,೯೩೪ ಕಡೆ ಕುಡಿಯುವ ನೀರು ಪರೀಕ್ಷೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಎಂಟೋಮಾಲಜಿಸ್ಟ್ ಮಂಜುನಾಥ್ ಮಾಹಿತಿ ನೀಡಿ ಡೆಂಗಿ ಜ್ವರವು ಒಂದು ವೈರಾಣುವಿನಿಂದ ಹರಡುವ ರೋಗವಾಗಿದ್ದು, ಸೋಂಕು ಹೊಂದಿದ ಈಡೀಸ್ ಈಜಿಪ್ಟೆöÊ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಜೊತೆಗೆ ಹಗಲು ವೇಳೆಯಲ್ಲಿ ಕಚ್ಚುತ್ತದೆ ಎಂದು ಮಾಹಿತಿ ನೀಡಿದರು.
ಹಾಗೆಯೇ ಸೋಂಕಿತ ಮನುಷ್ಯನನ್ನು ಕಚ್ಚಿದ ೭ ರಿಂದ ೮ ದಿನಗಳಲ್ಲಿ ಮತ್ತೆ ಮತ್ತೊಬ್ಬರಿಗೆ ಸೊಳ್ಳೆ ಕಚ್ಚಿದಾಗ ರೋಗ ಹರಡುತ್ತದೆ ಎಂದು ಅವರು ತಿಳಿಸಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಗೋಪಿನಾಥ್ ಮಾಹಿತಿ ನೀಡಿ ನೀರಿನ ತೊಟ್ಟಿ, ಡ್ರಮ್ಮು, ಬ್ಯಾರಲ್, ಏರ್ ಕೂಲರ್ ಇವುಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳಬೇಕು. ನೀರು ಖಾಲಿ ಮಾಡಲು ಸಾಧ್ಯವಿಲ್ಲದ ತೊಟ್ಟಿ ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚಬೇಕು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳೆನೀರಿನ ಚಿಪ್ಪು, ಒಡೆದ ಬಾಟಲಿಗಳಲ್ಲಿ ಮಳೆನೀರು ಸಂಗ್ರಹವಾಗದAತೆ ಎಚ್ಚರವಹಿಸುವುದು ಅಗತ್ಯ ಎಂದರು.
ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕಿ ಗೀತಾ, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಸ್ವಾಮಿ, ಪೌರಾಯುಕ್ತ ರಾಮದಾಸ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಶಿಕ್ಷಣ ಇಲಾಖೆಯ ವ್ಯವಸ್ಥಾಪಕ ಕೃಷ್ಣಪ್ಪ, ಮಕ್ಕಳ ರಕ್ಷಣಾಧಿಕಾರಿ ಅರುಂಧತಿ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ, ಪೂಣಚ್ಚ, ಪಂಚಾಯತ್ ಇಂಜಿನಿಯರಿAಗ್ ವಿಭಾಗದ ಪ್ರೇಮ್ ಕುಮಾರ್, ಬಿಸಿಎಂ ಇಲಾಖೆಯ ವ್ಯವಸ್ಥಾಪಕಿ ಕವಿತಾ, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಮಮತ ಇತರರು ಇದ್ದರು.