ಸೋಮವಾರಪೇಟೆ, ಮೇ ೧೩: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜಲಜೀವನ್ ಮಿಷನ್ ಅಡಿಯಲ್ಲಿ ಈಗಾಗಲೇ ಪ್ರಗತಿ ಯಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ವರದಿ ನೀಡಬೇಕೆಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸಂಬAಧಿಸಿದ ಅಭಿಯಂತರರಿಗೆ ಸೂಚನೆ ನೀಡಿದರು.

ತಾಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಶನಿವಾರಸಂತೆ, ದುಂಡಳ್ಳಿ, ಬ್ಯಾಡಗೊಟ್ಟ, ಕೊಡ್ಲಿಪೇಟೆ, ಬೆಸೂರು, ಹಂಡ್ಲಿ, ನಿಡ್ತ ಹಾಗೂ ಆಲೂರು-ಸಿದ್ದಾಪುರ ಗ್ರಾಮ ಪಂಚಾ ಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇದೇ ಸಂದರ್ಭ ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಶಾಸಕರು, ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೯ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ರೂ. ೧೫ ಲಕ್ಷ ಮಂಜೂರಾಗಿದ್ದು, ಇದರಲ್ಲಿ ರೂ. ೯ ಲಕ್ಷ ವೆಚ್ಚದಲ್ಲಿ ಟ್ಯಾಂಕ್ ನಿರ್ಮಿಸಲಾಗಿದೆ. ಆದರೆ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ. ನಿರ್ಮಾಣ ಗೊಂಡ ಒಂದು ತಿಂಗಳಿನಲ್ಲಿಯೇ ನೀರು ಸೋರಿಕೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದರು.

ಈ ಸಂದರ್ಭ ಅಭಿಯಂತರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಟ್ಯಾಂಕ್ ನಿರ್ಮಾಣದಲ್ಲಿ ನುರಿತ ಗುತ್ತಿಗೆದಾರರಿಗೆ ಮಾತ್ರ ಟೆಂಡರ್ ನೀಡಬೇಕು.

ಕುಡಿಯುವ ನೀರಿನ ಕಾಮಗಾರಿ ಕಳಪೆಯಾದರೆ ಸಹಿಸುವುದಿಲ್ಲ. ತಕ್ಷಣ ಇದನ್ನು ಸರಿಪಡಿಸುವಂತೆ ಅಭಿಯಂತರ ವೀರೇಂದ್ರ ಹಾಗೂ ಸಲೀಂ ಅವರುಗಳಿಗೆ ಸೂಚಿಸಿ ದರಲ್ಲದೆ, ಗುತ್ತಿಗೆದಾರನಿಗೆ ನೋಟೀಸ್ ನೀಡುವಂತೆ ನಿರ್ದೇಶಿಸಿದರು.

ಕಾಮಗಾರಿ ನಡೆಯುವ ಸಂದರ್ಭ ಸ್ಥಳೀಯರು ಸ್ಥಳದಲ್ಲಿದ್ದು, ಕಾಮಗಾರಿಯ ಗುಣಮಟ್ಟದ ಬಗ್ಗೆ ಗಮನಹರಿಸಬೇಕು. ಅಭಿಯಂತರರು ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸಬೇಕು. ಒಂದು ವೇಳೆ ಕಾಮಗಾರಿ ಪ್ರಗತಿಯಲ್ಲಿರುವಾಗ ಕಳಪೆಯಾಗುತ್ತಿರುವುದು ಕಂಡುಬAದರೆ ತಮ್ಮ ಗಮನಕ್ಕೆ ತರುವಂತೆ ಶಾಸಕರು ತಿಳಿಸಿದರು. ಈ ಸಂದರ್ಭ ದುಂಡಳ್ಳಿ ಗ್ರಾ.ಪಂ. ಉಪಾಧ್ಯಕ್ಷ ನಿತಿನ್, ಸದಸ್ಯೆ ಭಾಗ್ಯಮ್ಮ, ಪಿಡಿಓ ವೇಣುಗೋಪಾಲ್, ದೇವರಾಜ್, ಮನು, ಪ್ರಮುಖರಾದ ರಕ್ಷಿತ್, ಕಿರಣ್, ಕೆ.ಟಿ. ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.