ಮಡಿಕೇರಿ, ಮೇ ೧೩: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ೨೦೨೨-೨೩ನೇ ಸಾಲಿಗೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ವಿಕಲಚೇತನರಿಂದ ಮತ್ತು ಹಿರಿಯ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜೂನ್ ೩೦ ರೊಳಗೆ ಕಚೇರಿಗೆ ಅಥವಾ ಆಯಾಯ ತಾಲೂಕಿನ ಗ್ರಾಮ ಪಂಚಾಯಿತಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬೇಕು. ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ೧೦ನೇ ತರಗತಿ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಮರು ಪಾವತಿಸುವ ಯೋಜನೆ, ವಿಕಲಚೇತನರಿಗೆ ಅವಶ್ಯವಿರುವ ಸಾಧನ ಸಲಕರಣೆಗಳು, ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ ಪ್ರೋತ್ಸಾಹ ಧನ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಸ್ಪರ್ಧಾ ಚೇತನ, ಸಾಧನೆ ಪ್ರತಿಭೆ, ಅಂಧ ಮಹಿಳೆಗೆ ಜನಿಸುವ ಮೊದಲ ಎರಡು ಶಿಶುಗಳ ಪಾಲನೆಗಾಗಿ ಸಹಾಯ ಧನ (ಶಿಶು ಪಾಲನಾ ಭತ್ಯೆ), ೧೦ನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ವಿಕಲಚೇತನರಿಗೆ ನಿರುದ್ಯೋಗ ಭತ್ಯೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿಕಲಚೇತನರಿಗೆ ಕೋಚಿಂಗ್‌ಗೆ ಸಹಾಯ ಧನ, ೧೦ನೇ ತರಗತಿ ನಂತರದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಹಾಗೂ ಬ್ರೆöÊಲ್ ಕಿಟ್ ನೀಡುವ ಯೋಜನೆ, ಆಧಾರ ಯೋಜನೆಯಡಿ ಸ್ವಯಂ ಉದ್ಯೋಗಕ್ಕಾಗಿ ಸಾಲ ಹಾಗೂ ಸಹಾಯ ಧನ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಮತ್ತು ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ. ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಅಧಿಕಾರಿ ವಿಮಲ ತಿಳಿಸಿದ್ದಾರೆ.