ಸೋಮವಾರಪೇಟೆ, ಮೇ ೧೨: ಸೋಮವಾರಪೇಟೆ-ಕೊಣನೂರು ರಾಜ್ಯ ಹೆದ್ದಾರಿಯ ತಣ್ಣೀರುಹಳ್ಳ ಗ್ರಾಮದಲ್ಲಿ ರಸ್ತೆಯ ಮೇಲೆ ಕೊಳಚೆ ನೀರಿನ ಕೆರೆ ನಿರ್ಮಾಣವಾಗಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಲೋಕೋಪಯೋಗಿ ಇಲಾಖೆಗೆ ಒಳಪಡುವ ಈ ರಸ್ತೆಯು ದುರಸ್ತಿ ಭಾಗ್ಯ ಕಾಣದೇ ಇರುವುದರಿಂದ ತಣ್ಣೀರುಹಳ್ಳ ಸೇತುವೆ ಬಳಿಯಲ್ಲಿ ಮಳೆ ನೀರು ಸಂಗ್ರಹಗೊAಡು ಸಂಚಾರಕ್ಕೆ ಸಂಚಕಾರ ತಂದೊಡ್ಡಿದೆ.

ದಿನAಪ್ರತಿ ಸಾವಿರಾರು ವಾಹನಗಳು, ದ್ವಿಚಕ್ರ ಸವಾರರು ಈ ರಸ್ತೆಯಲ್ಲಿ ತೆರಳುತ್ತಿದ್ದು, ರಸ್ತೆಯ ಮಧ್ಯಭಾಗದಲ್ಲಿಯೇ ಹೊಂಡಾಗುAಡಿಗಳು ನಿರ್ಮಾಣವಾಗಿರುವುದರಿಂದ ಸಂಚಾರಕ್ಕೆ ಸಮಸ್ಯೆಯಾಗಿದೆ. ಇದರೊಂದಿಗೆ ಸೇತುವೆಯ ಮೇಲ್ಭಾಗದಲ್ಲೂ ಮಳೆ ನೀರು ಸಂಗ್ರಹವಾಗುತ್ತಿದ್ದು, ನಡೆದಾಡಲೂ ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರವೀಣ್ ಆರೋಪಿಸಿದ್ದಾರೆ.

ಇನ್ನೇನು ಮಳೆಗಾಲ ಆರಂಭಗೊಳ್ಳುತ್ತಿದ್ದು, ಅದಕ್ಕೂ ಮುಂಚೆ ರಸ್ತೆಯ ಎರಡೂ ಬದಿಯಲ್ಲಿ ಚರಂಡಿ ನಿರ್ಮಿಸಿ ಮಳೆ ನೀರಿನ ಸರಾಗ ಹರಿವಿಗೆ ಕ್ರಮ ಕೈಗೊಳ್ಳಬೇಕು. ರಸ್ತೆ ಹಾಗೂ ಸೇತುವೆಯ ಮೇಲೆ ನಿರ್ಮಾಣವಾಗಿರುವ ಗುಂಡಿಗಳನ್ನು ಮುಚ್ಚಿ ಮಳೆ ನೀರು ಬದಿಯಲ್ಲಿ ಹರಿಯಲು ಕ್ರಮವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಸ್ತೆಯ ಅವ್ಯವಸ್ಥೆ ಬಗ್ಗೆ ಲೋಕೋಪಯೋಗಿ ಇಲಾಖೆಗೆ ಹಲವಷ್ಟು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷö್ಯದಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿದೆ. ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳದಿದ್ದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರಾದ ಪ್ರವೀಣ್, ಕಿಶೋರ್, ರವಿ ಸೇರಿದಂತೆ ಇತರರು ಎಚ್ಚರಿಸಿದ್ದಾರೆ.