ಸಚಿವ ಬಿ.ಸಿ. ನಾಗೇಶ್ ಘೋಷಣೆ

ಮಡಿಕೇರಿ, ಮೇ ೧೩: ತಾ. ೧೯ ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸ ಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ.

ಎಸ್.ಎಸ್.ಎಲ್.ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ನಿರ್ದಿಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಇದೀಗ ಸಚಿವ ಬಿ.ಸಿ. ನಾಗೇಶ್ ಅವರು, ತಾ. ೧೯ ರಂದು ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಏಚಿಡಿಟಿಚಿಣಚಿಞಚಿ Seಛಿoಟಿಜಚಿಡಿಥಿ ಇಜuಛಿಚಿಣioಟಿ ಇxಚಿmiಟಿಚಿಣioಟಿ ಃoಚಿಡಿಜ -ಏSಇಇಃ) ತನ್ನ ೨೦೨೨ ರ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲಿದೆ.

ಬಿಡುಗಡೆ ಆಗುವ ಫಲಿತಾಂಶವನ್ನು ವಿದ್ಯಾರ್ಥಿಗಳು, ಅಧಿಕೃತ ವೆಬ್‌ಸೈಟ್ ಞಚಿಡಿಡಿesuಟಣs.ಟಿiಛಿ.iಟಿ ಮತ್ತು ssಟಛಿ.ಞಚಿಡಿಟಿಚಿಣಚಿಞಚಿ.gov.iಟಿನಲ್ಲಿ ವೀಕ್ಷಿಸಬಹುದಾಗಿದೆ.