ಮಡಿಕೇರಿ, ಮೇ ೧೩: ರಾಷ್ಟಿçÃಯ ಡೆಂಗ್ಯು ದಿನಾಚರಣೆ ಅಂಗವಾಗಿ ಡೆಂಗ್ಯು ಜ್ವರದ ಮುಂಜಾಗ್ರತಾ ಕ್ರಮಗಳ ಬಗ್ಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ತಾ. ೧೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಾಥಾವು ನಗರದ ಬಾಲಭವನದಿಂದ ಪ್ರಾರಂಭವಾಗಿ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ವೃತ್ತದವರೆಗೆ ನಡೆಯಲಿದೆ ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಗೋಪಿನಾಥ್ ತಿಳಿಸಿದ್ದಾರೆ.