ಮಡಿಕೇರಿ, ಮೇ ೧೨: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ತಾ. ೧೫ ರ ಒಳಗಾಗಿ ಅರ್ಜಿ ಸಲ್ಲಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ, ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷರಾಗಿದ್ದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಮ್ಮ ತಂದೆ ಸಣ್ಣುವಂಡ ಮಾದಪ್ಪ ಹಾಗೂ ತಾಯಿ ಜಾನಕಿ ಮಾದಪ್ಪ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ಕುರಿತ ವರದಿ ಪ್ರಶಸ್ತಿ, ಜಿಲ್ಲಾ ಸಂಘದ ಅಧ್ಯಕ್ಷೆ ಬಿ.ಆರ್ ಸವಿತಾ ರೈ ಅವರು ತಮ್ಮ ತಂದೆ ಕೃಷಿಕರಾಗಿದ್ದ ಬಿ.ಎಸ್ ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ದೃಶ್ಯ ಮಾಧ್ಯಮದ ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿ, ರಾಷ್ಟಿçÃಯ ಸಮಿತಿ ಸದಸ್ಯರಾಗಿದ್ದ ಎಸ್.ಎ. ಮುರುಳಿಧರ್ ಅವರು ತಮ್ಮ ಸಹೋದರ ಗಣೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವರದಿಯು ೨೦೨೧ ರ ಜನವರಿಯಿಂದ ೨೦೨೧ ರ ಡಿಸೆಂಬರ್ ೩೧ ರ ಒಳಗಾಗಿ ಪ್ರಕಟವಾಗಿರಬೇಕು ಹಾಗೂ ಅರ್ಜಿ ಸಲ್ಲಿಸುವವರು ತಾಲೂಕು ಸಂಘದ ಸದಸ್ಯರಾಗಿರಬೇಕು. ದೃಶ್ಯ ಮಾಧ್ಯಮದ ಅತ್ಯುತ್ತಮ ಕೃಷಿ ವರದಿಗೆ ಪ್ರಕಟವಾದ ವರದಿಯ ಸಿ.ಡಿ.ಯನ್ನು ಒದಗಿಸುವುದು ಕಡ್ಡಾಯ. ವರದಿಯ ಮೂರು ನಕಲು ಪ್ರತಿಯೊಂದಿಗೆ ಅರ್ಜಿಯನ್ನು ತಾ. ೧೫ರ ಒಳಗಾಗಿ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಅವರಿಗೆ ತಲುಪಿಸಬೇಕೆಂದು ಕೋರಲಾಗಿದೆ.