ಕೂಡಿಗೆ, ಮೇ ೧೩: ಕೂಡಿಗೆಯ ಕೃಷಿ ಕ್ಷೇತ್ರದ ಆವರಣದಲ್ಲಿರುವ ಸರಕಾರಿ ಕ್ರೀಡಾ ಪ್ರೌಢಶಾಲೆಯ ಜಾಗದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಪದವಿ ವಸತಿ ನಿಲಯದ ಕಟ್ಟಡವನ್ನು ನಿರ್ಮಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಈಗಾಗಲೇ ರಾಜ್ಯ ಸರ್ಕಾರಕ್ಕೆ ಎರಡೂವರೆ ಕೋಟಿ ರೂಪಾಯಿಗಳ ಪ್ರಸ್ತಾವನೆ ಕಳುಹಿಸಲಾಗಿದೆ.

ಕೂಡಿಗೆ ಕ್ರೀಡಾ ಶಾಲೆಗೆ ರಾಜ್ಯ ಸರ್ಕಾರದ ಕ್ರೀಡಾ ಸಚಿವರು ಭೇಟಿ ನೀಡಿದ ಸಂದರ್ಭ ಪದವಿ ತರಗತಿಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ಪ್ರಥಮವಾಗಿ ಕೂಡಿಗೆ ಕ್ರೀಡಾ ಶಾಲೆಯಲ್ಲಿ ಪದವಿ ವಸತಿ ನಿಲಯದ ಕಟ್ಟಡವನ್ನು ನಿರ್ಮಾಣ ಮಾಡಲು ಕ್ರಿಯಾ ಯೋಜನೆ ತಯಾರಿಸಲು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಈ ಸಂಬAಧ ಸಚಿವರು ಸೂಚನೆ ನೀಡಿದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ತಿಳಿಸಿದ್ದಾರೆ.

ಮೂರು ವರ್ಷಗಳಿಂದ ಪಿಯುಸಿ ವಿದ್ಯಾರ್ಥಿಗಳು ಉನ್ನತ ಪದವಿ ತರಗತಿಯನ್ನು ಪಡೆಯಲು ಸಮರ್ಪಕವಾದ ಮೂಲಭೂತ ಸೌಕರ್ಯಗಳು ಮತ್ತು ವಸತಿ ವ್ಯವಸ್ಥೆ ಇಲ್ಲದ ಕಾರಣದಿಂದಾಗಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಪಿಯು ತರಗತಿಯಲ್ಲಿ ತೇರ್ಗಡೆ ಹೊಂದಿದ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ವಿದ್ಯಾರ್ಥಿಗಳ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.