ಮಡಿಕೇರಿ, ಮೇ ೧೪: ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದಲ್ಲಿ ೯ನೇ ತರಗತಿಯಲ್ಲಿ ಓದುತ್ತಿರುವ ಎನ್.ಸಿ.ಸಿ. ಕೆಡೆಟ್‌ಗಳಾದ ಸಾರ್ಜಂಟ್ ಗ್ಯಾನ್ ಕಾವೇರಪ್ಪ ಎಂ.ಎನ್. ಹಾಗೂ ಸಾರ್ಜಂಟ್ ದೇಚಮ್ಮ ಎಂ.ಎಸ್. ಅವರು ದಕ್ಷಿಣ ಕನ್ನಡ, ಕೊಡಗು ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಮಂಗಳೂರು ವಿಭಾಗ ಮಟ್ಟದಲ್ಲಿ ನಡೆದ ಬೆಸ್ಟ್ ಕೆಡೆಟ್ ಸ್ಪರ್ಧೆಯಲ್ಲಿ ಭಾಗವಹಿಸಿ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ಕೆಡೆಟ್‌ಗಳಾಗಿ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಮೇಜರ್ ದಾಮೋದರ ಗೌಡ ಅವರ ಮಾರ್ಗದರ್ಶನದಲ್ಲಿ ತರಬೇತಿಯನ್ನು ಪಡೆದುಕೊಂಡಿರುತ್ತಾರೆ ಎಂದು ಶಾಲೆಯ ಪ್ರಾಂಶುಪಾಲೆ ಕೆ.ಎಸ್. ಸುಮಿತ್ರಾ ಅವರು ತಿಳಿಸಿದ್ದಾರೆ.