ಮುಳ್ಳೂರು, ಮೇ ೧೫: ಶನಿವಾರಸಂತೆ ಸಮೀಪದ ಗುಡುಗಳಲೆ ಜಾತ್ರಾ ಮೈದಾನ ದಲ್ಲಿರುವ ಶ್ರೀ ಕಾಳಿಕಾಂಭದೇವಿಯ ೭ನೇ ವಾರ್ಷಿಕ ಪೂಜಾ ಮಹೋತ್ಸವ ಸಾಮೂಹಿಕ ಉಪನಯನ ಮತ್ತು ಕುಂಕುಮಾರ್ಚನೆ ಕಾರ್ಯಕ್ರಮ ತಾ. ೧೯ ರಂದು ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಬಿ. ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ ೬ ಗಂಟೆಯಿAದ ಮಹಾ ಗಣಪತಿ ಪೂಜೆ, ಸ್ವಸ್ತಿಶ್ರೀ ಪುಣ್ಯಾಹವಾಚನ, ಮುಂತಾದ ಧಾರ್ಮಿಕ ವಿದಿ ವಿಧಾನಗಳು ನಡೆಯಲಿವೆ.

ಅರಕಲಗೂಡು ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಸುಜ್ಞಾನ ಪ್ರಭುಪೀಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಕಲ್ಲುಮಠದ ಮಹಾಂತ ಸ್ವಾಮೀಜಿ ಇವರುಗಳ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

ಬೆಳಿಗ್ಗೆ ೧೦.೩೦ಕ್ಕೆ ಮಹಿಳೆಯರಿಂದ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದ್ದು ಮಧ್ಯಾಹ್ನ ೧೨ ಗಂಟೆಯಿAದ ಶನಿವಾರಸಂತೆ ವಿಶ್ವಕರ್ಮ ಸಮಾಜ ಅಧ್ಯಕ್ಷ ಬಿ.ಬಿ. ನಾಗರಾಜು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಹಂಡ್ಲಿ ಗ್ರಾ.ಪಂ. ಅಧ್ಯಕ್ಷೆ ಮಹಾದೇವಮ್ಮ, ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ನಾಮ ನಿರ್ದೇಶಕ ಎಚ್.ಎಲ್. ಸುಬ್ರಮಣ್ಯ, ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಎಸ್.ಜೆ. ದೇವದಾಸ್, ತಾಲೂಕು ಅಧ್ಯಕ್ಷ ಎಸ್.ಬಿ. ಯಶ್ವಂತ್, ಗುಡುಗಳಲೆ ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಬಿ. ಧರ್ಮಪ್ಪ, ಗ್ರಾ.ಪಂ. ಸದಸ್ಯ ಎಚ್.ಎಸ್. ಅಶೋಕ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಅಂದು ನಡೆಯಲಿರುವ ಉಪನಯನ ಕಾರ್ಯಕ್ರಮಕ್ಕೆ ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಮಹಿಳೆಯರು ಕುಂಕುಮಾರ್ಚನೆಗೂ ಹೆಸರು ನೋಂದಾಯಿಸಿ ಕೊಳ್ಳಬೇಕಾಗುತ್ತದೆ ಎಂದÀÄ ನಾಗರಾಜ್ ಮಾಹಿತಿ ನೀಡಿದ್ದಾರೆ.

ಗೋಷ್ಠಿಯಲ್ಲಿ ದೇವಸ್ಥಾನ ಸಮಿತಿ ಗೌರವಾಧ್ಯಕ್ಷ ಕೆ.ಎಲ್. ಲಕ್ಷö್ಮಣಾಚಾರ್, ಸಮಿತಿ ಪದಾಧಿಕಾರಿಗಳಾದ ಜಿ.ಆರ್. ಧರ್ಮಪಾಲ, ಸಿ.ಸಿ. ಚಂದ್ರಶೇಖರ್, ಸಿ.ಸಿ. ಶೇಷಾಚಾರಿ, ಎಂ.ಟಿ. ರಂಗಾಚಾರಿ ಹಾಜರಿದ್ದರು.