ಮಡಿಕೇರಿ, ಮೇ ೧೪: ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮನೆ ಸುಟ್ಟು ಕರಕಲಾದ ಘಟನೆ ಮಡಿಕೇರಿ ಹೊರವಲಯದ ಮೆಡಿಕಲ್ ಕಾಲೇಜು ಬಳಿಯ ರಸ್ತೆಯಲ್ಲಿ ನಡೆದಿದೆ.

ಸುನೀಲ್ ಡಿಸೋಜ ಎಂಬವರ ಮನೆಯಲ್ಲಿ ಮಧ್ಯಾಹ್ನ ಹೊತ್ತಿನಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಹೊಗೆ ಕಂಡು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಬರುವಷ್ಟರಲ್ಲಿ ಮನೆ ಹೊತ್ತಿ ಉರಿದಿದೆ. ಮನೆಯವರು ಕಾರ್ಯಕ್ರಮ ನಿಮಿತ್ತ ಮೇಕೇರಿಗೆ ತೆರಳಿದ್ದ ಸಂದರ್ಭ ಘಟನೆ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ಅವಘಡಕ್ಕೆ ಕಾರಣ ಎನ್ನಲಾಗಿದೆ. ಅಗ್ನಿ ಅನಾಹುತದಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.