ಮಡಿಕೇರಿ, ಮೇ ೧೫: ಸೋಮವಾರಪೇಟೆ ತಾಲೂಕು ಸಹಕಾರ ಇಲಾಖೆ ಅಭಿವೃದ್ಧಿ ಅಧಿಕಾರಿಯಾಗಿದ್ದ ಮೋಹನ್ ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ಮುಂಬಡ್ತಿ ಹೊಂದಿದ ಹಿನ್ನೆಲೆ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿದೋದ್ಧೇಶ ಸಹಕಾರ ಸಂಘದ ವತಿಯಿಂದ ಸಂಘದ ಕಚೆೆÃರಿಯಲ್ಲಿ ಮೋಹನ್ ಅವರನ್ನು ಸನ್ಮಾನಿಸಲಾಯಿತು.
ಸಂಘದ ಮಾಜಿ ಅಧ್ಯಕ್ಷ ಕೆ.ಎಂ.ಬಿ. ಗಣೇಶ್ ಹಾಗೂ ಕೊಡಗು ಜಿಲ್ಲೆಯ ಪತ್ರಕರ್ತ ಸಂಘದ ಅಧ್ಯಕ್ಷೆಯಾಗಿ ಚುನಾಯಿತರಾದ ಸವಿತಾ ರೈ ಅವರುಗಳನ್ನು ಇದೇ ಸಂದರ್ಭ ಗೌರವಿಸಿ ಸನ್ಮಾನಿಸ ಲಾಯಿತು. ಸಂಘದ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್, ಉಪಾಧ್ಯಕ್ಷ ರಾಮಕೃಷ್ಣ, ಮಾಜಿ ಅಧ್ಯಕ್ಷ ಗಿರೀಶ್ ಗಣಪತಿ ಮತ್ತು ನಿರ್ದೇಶಕರುಗಳು ಭಾಗವಹಿಸಿದ್ದರು.