ಕುಶಾಲನಗರ, ಮೇ ೧೫: ಕೆಲದಿನಗಳ ಹಿಂದೆ ಕುಶಾಲನಗರ ಸರ್ಕಾರಿ ಬಸ್ ನಿಲ್ದಾಣದ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅಪರಿಚಿತ ವ್ಯಕ್ತಿ ಶನಿವಾರ ಮೃತಪಟ್ಟಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಮಡಿಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಕುಶಾಲನಗರ ಪೊಲೀಸರು ತಿಳಿಸಿದ್ದಾರೆ. ವಾರಿಸುದಾರರು ಪತ್ತೆಯಾದಲ್ಲಿ ತಕ್ಷಣ ಕುಶಾಲನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಕೋರಿದ್ದಾರೆ.