ಕ್ರಿಕೆಟ್ ದಂತಕಥೆ ಆಂಡ್ರೂö್ಯ ಸೈಮಂಡ್ಸ್ ಇನ್ನಿಲ್ಲ

ಆಸ್ಟೆçÃಲಿಯಾ, ಮೇ ೧೫: ಆಸ್ಟೆçÃಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ‍್ಯೂ ಸೈಮಂಡ್ಸ್ ಶನಿವಾರ ತಡರಾತ್ರಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಸ್ಟೆçÃಲಿಯನ್ ಪೊಲೀಸರ ಪ್ರಕಾರ, ಅವರು ಕಾರಿನಲ್ಲಿ ಒಬ್ಬರೇ ಇದ್ದರು ಎಂದು ತಿಳಿದುಬಂದಿದೆ. ಶನಿವಾರ ತಡರಾತ್ರಿ ಅವರ ಕಾರು ಟೌನ್ಸ್ವಿಲ್ಲೆಯಲ್ಲಿ ರಸ್ತೆ ಅಪಘಾತ ಆಗಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಅಪಘಾತದ ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಆಂಡ್ರ‍್ಯೂ ಸೈಮಂಡ್ಸ್ ಅವರ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರದಿಯಲ್ಲಿ ತಿಳಿಸಲಾಗಿದೆ.

ಗುಂಡಿನ ಚಕಮಕಿಯಲ್ಲಿ ನಾಗರಿಕ ಸಾವು

ಶ್ರೀನಗರ, ಮೇ ೧೫: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಿಟ್ಟರ್‌ನಲ್ಲಿ ಇಂದು ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಾಗರಿಕ ಸಾವನ್ನಪ್ಪಿದ್ದಾನೆ. ಇಂದು ಮಧ್ಯಾಹ್ನ ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ತುರ್ಕವಾಂಗಮ್‌ನಿAದ ಲಿಟ್ಟರ್ ಸಂಪರ್ಕಿಸುವ ಸೇತುವೆಯ ಬಳಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ವಿಶೇಷ ಕಾರ್ಯಾಚರಣೆ ದಳದ (ಎಸ್‌ಒಜಿ) ೧೮೨ನೇ ಬೆಟಾಲಿಯನ್ ಜಂಟಿ ಗಸ್ತು ತಂಡದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಶೋಪಿಯಾನ್‌ನ ತುರ್ಕವಾಂಗಮ್ ನಿವಾಸಿ ಶೋಯೆಬ್ ಅಹ್ಮದ್ ಘನಿ ಗಾಯಗೊಂಡಿದ್ದು ಪುಲ್ವಾಮಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಿದರು. ಸ್ವಲ್ಪ ಸಮಯದ ನಂತರ ಭಯೋತ್ಪಾದಕರು ಹತ್ತಿರದ ತೋಟಗಳಲ್ಲಿ ಅಡಗಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಹೈಕಮಾಂಡ್ ನಿರ್ದೇಶನ ಬಳಿಕ ಕ್ಯಾಬಿನೆಟ್ ವಿಸ್ತರಣೆ

ಹುಬ್ಬಳ್ಳಿ, ಮೇ ೧೫: ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಫೋನ್‌ನಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು. ರಾಜ್ಯ ಸರ್ಕಾರ ಚುನಾವಣಾ ಪ್ರಕ್ರಿಯೆಯಲ್ಲಿದೆ. ಹೈಕಮಾಂಡ್ ನಿರ್ದೇಶನ ನೀಡಿದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು, ಈ ಸಂಬAಧ ಇನ್ನೆರಡು ದಿನದಲ್ಲಿ ಹೈಕಮಾಂಡ್ ಜೊತೆಗೆ ದೂರವಾಣಿ ಮೂಲಕ ಮಾತನಾಡುತ್ತೇನೆ ಎಂದರು. ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಸಂಪುಟ ಸೇರ್ಪಡೆ ವಿಷಯ ಹೈಕಮಾಂಡ್‌ಗೆ ಬಿಟ್ಟಿದ್ದು, ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ಬಗ್ಗೆ ಗಮನ ಹರಿಸಲಾಗುವುದು ಎಂದು ಅವರು ಹೇಳಿದರು.

ಶಾಸಕ ಜಿ.ಟಿ. ದೇವೇಗೌಡ ಮೊಮ್ಮಗಳು ನಿಧನ

ಮೈಸೂರು, ಮೇ ೧೫: ಶಾಸಕ ಜಿ.ಟಿ. ದೇವೇಗೌಡರ ೩ ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾಳೆ. ಜಿ.ಟಿ. ದೇವೇಗೌಡರ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು ೩ ವರ್ಷದ ಗೌರಿ ಮೃತ ದುರ್ದೈವಿ. ಅನಾರೋಗ್ಯದಿಂದ ಬಳಲುತ್ತಿದ್ದ ಗೌರಿಳನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯರಾತ್ರಿ ನಿಧನ ಹೊಂದಿದ್ದಾಳೆ.

ನೇಪಾಳದೊಂದಿಗಿನ ಭಾರತದ ಬಾಂಧವ್ಯ ವೃದ್ಧಿ-ಮೋದಿ

ನವದೆಹಲಿ, ಮೇ ೧೫: ನೇಪಾಳದೊಂದಿಗಿನ ಭಾರತದ ಬಾಂಧವ್ಯ ಅನನ್ಯ. ತಮ್ಮ ನೇಪಾಳ ಭೇಟಿಯು ಪರಸ್ಪರ ಸಂಬAಧಗಳನ್ನು ಮತ್ತಷ್ಟ ಗಾಢವಾಗಿಸುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ತಮ್ಮ ಹೇಳಿಕೆಯಲ್ಲಿ ಮೋದಿ ಅವರು, ನೇಪಾಳದೊಂದಿಗಿನ ನಮ್ಮ ಸಂಬAಧ ಅನನ್ಯವಾಗಿದೆ. ಭಾರತ ಮತ್ತು ನೇಪಾಳದ ನಡುವಿನ ನಾಗರಿಕತೆ ಮತ್ತು ನಮ್ಮ ನಿಕಟ ಸಂಬAಧಗಳ ಬಲವಾದ ಅಡಿಪಾಯವಾಗಿದೆ. ಶತ ಶತಮಾನಗಳಿಂದಲೂ ಕಾಲದ ಪರೀಕ್ಷೆಯಲ್ಲಿ ನಿಂತಿರುವ ಈ ಬಂಧಗಳನ್ನು ಆಚರಿಸುವುದು ಮತ್ತು ಗಾಢವಾಗಿಸುವುದು ತನ್ನ ಭೇಟಿಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಆಹ್ವಾನದ ಮೇರೆಗೆ ಮೋದಿ ಅವರು ಮೇ ೧೬ರಂದು ಲುಂಬಿನಿಗೆ ಭೇಟಿ ನೀಡಲಿದ್ದಾರೆ. ಬುದ್ಧ ಜಯಂತಿಯ ಶುಭ ಸಂದರ್ಭದಲ್ಲಿ ಮಾಯಾದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಉತ್ಸುಕನಾಗಿದ್ದೇನೆ. ಭಗವಾನ್ ಬುದ್ಧನ ಪವಿತ್ರ ಜನ್ಮಸ್ಥಳದಲ್ಲಿ ಲಕ್ಷಾಂತರ ಭಾರತೀಯರು ಗೌರವ ಸಲ್ಲಿಸುವುದಕ್ಕಾಗಿ ನನಗೆ ಗೌರವವಿದೆ. ಕಳೆದ ತಿಂಗಳು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಫಲಪ್ರದ ಚರ್ಚೆಯ ನಂತರ ಮತ್ತೊಮ್ಮೆ ದೇವುಬಾ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ. ಜಲವಿದ್ಯುತ್, ಅಭಿವೃದ್ಧಿ ಮತ್ತು ಸಂಪರ್ಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು. ಭಾರತದ 'ನೆರೆಹೊರೆ ಮೊದಲು' ನೀತಿಯನ್ನು ಮುಂದಕ್ಕೆ ಕೊಂಡೊಯ್ಯಲು ಭಾರತ ಮತ್ತು ನೇಪಾಳದ ನಡುವಿನ ವಿನಿಮಯದ ಸಂಪ್ರದಾಯವನ್ನು ಮುಂದುವರೆಸುವಲ್ಲಿ ಮೋದಿಯವರ ಭೇಟಿಯು ಮುಂದಿನ ಹಂತವಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ತ್ರಿಪುರಾದ ಸಿಎಂ ಆಗಿ ಮಾಣಿಕ್ ಸಾಹಾ

ಅಗರ್ತಲಾ, ಮೇ ೧೫: ತ್ರಿಪುರಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಾಹಾ ಅವರಿಂದು ರಾಜ್ಯದ ೧೧ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್.ಎನ್. ಆರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮಾಜಿ ಮುಖ್ಯಮಂತ್ರಿ ಬಿಪ್ಬಲ್ ಕುಮಾರ್ ದೇಬ್ ಶನಿವಾರ ಸಂಜೆ ದಿಢೀರನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮಾಣಿಕ್ ಸಾಹಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ್ನಾಗಿ ನೇಮಕ ಮಾಡಲಾಗಿತ್ತು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಚಿವರು, ಬಿಜೆಪಿಯ ಶಾಸಕರು ಉಪಸ್ಥಿತರಿದ್ದರು.

ಗುಂಡಿನ ದಾಳಿ - ೧೦ ಮಂದಿ ಸಾವು

ನ್ಯೂಯಾರ್ಕ್, ಮೇ ೧೫: ನ್ಯೂಯಾರ್ಕ್ನಲ್ಲಿನ ಬಫಲೊ ನಗರದ ಸೂಪರ್ ಮಾರ್ಕೆಟ್‌ನಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ೧೦ ಮಂದಿ ಮೃತಪಟ್ಟಿದ್ದಾರೆ. ಬಂದೂಕುಧಾರಿ ವ್ಯಕ್ತಿಯೊಬ್ಬ ಸುರಕ್ಷಾ ಕವಚ ಹಾಗೂ ಹೆಲ್ಮೆಟ್ ಧರಿಸಿ ಸೂಪರ್ ಮಾರ್ಕೆಟ್ ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ೧೦ ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆAದು ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟ ೧೦ ಮಂದಿಯ ಪೈಕಿ ಹಲವರು ಆಫ್ರಿಕನ್ ಅಮೆರಿಕನ್ನರಾಗಿದ್ದು, ದಾಳಿ ನಡೆಸಿದ ದುಷ್ಕರ್ಮಿ ದಾಳಿ ಕೃತ್ಯವನ್ನು ಕ್ಯಾಮೆರಾದಲ್ಲಿ ಲೈವ್ ಸ್ಟ್ರೀಮ್ ಮಾಡಿದ್ದಾನೆಂದು ಹೇಳಿದ್ದಾರೆ. ಮೊದಲು ಪಾರ್ಕಿಂಗ್ ಸ್ಥಳದಲ್ಲಿದ್ದ ನಾಲ್ಕು ಜನರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ, ಬಳಿಕ ಸೂಪರ್‌ಮಾರ್ಕೆಟ್ ಒಳಗೆ ನುಗ್ಗಿ ದಾಳಿ ಮಾಡಿದ್ದಾನೆ. ಮೃತಪಟ್ಟವರಲ್ಲಿ ಒಬ್ಬರು ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದು, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರು (ನಿವೃತ್ತ ಪೊಲೀಸ್ ಅಧಿಕಾರಿ) ಮೃತಪಡುವ ಮುನ್ನ ದಾಳಿಕೋರನ ಮೇಲೆ ಹಲವು ಸುತ್ತಿನ ಪ್ರತಿದಾಳಿ ನಡೆಸಿದ್ದರು ಎಂದು ವಿವರಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ ಬಳಿಕ, ದಾಳಿಕೋರ ತನ್ನ ಕುತ್ತಿಗೆ ಬಳಿಗೆ ಗನ್ ಹಿಡಿದುಕೊಂಡು ಶರಣಾಗಿದ್ದಾನೆ. ಪ್ರಕರಣವನ್ನು ದ್ವೇಷ ಅಪರಾಧ ಮತ್ತು ಜನಾಂಗೀಯ ಪ್ರೇರಿತ ಕೃತ್ಯವೆಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಬಫಲೊದಲ್ಲಿರುವ ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಕಚೇರಿಯ ಉಸ್ತುವಾರಿ ಅಧಿಕಾರಿ ಸ್ಟೀಫನ್ ಬೆಲೊಂಗಿಯಾ ಅವರು ತಿಳಿಸಿದ್ದಾರೆ.