ಮಡಿಕೇರಿ, ಮೇ ೧೫: ನಗರಸಭೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ೨೦೨೧-೨೨ನೇ ಸಾಲಿನ ಶೇ.೨೪.೧೦ ರ ಎಸ್‌ಎಫ್‌ಸಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿAಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಪೌರ ಕಾರ್ಮಿಕ ಕುಟುಂಬದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು.