ಶನಿವಾರಸಂತೆ, ಮೇ ೧೫: ಶನಿವಾರಸಂತೆ ಪೊಲೀಸ್ ಠಾಣಾ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪಟ್ಟಣ ಪಂಚಾಯಿತಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಸೋಮ ವಾರಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಾನೂನು ಸಲಹಾ ಕಾರ್ಯಕ್ರಮವನ್ನು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಎನ್. ಸುಬ್ರಮಣ್ಯ ಉದ್ಘಾಟಿಸಿ, ಕಾನೂನಿನ ಹಲವು ಅಂಶಗಳು ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಎಸ್. ಪರಶಿವಮೂರ್ತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಠಾಣಾಧಿಕಾರಿ ಗೋವಿಂದ್‌ರಾಜ್, ಸಹಾಯಕ ಠಾಣಾಧಿಕಾರಿಗಳಾದ ಶಿವಲಿಂಗ, ಶಶಿಧರ್, ಹೆಡ್‌ಕಾನ್ಸ್ ಟೇಬಲ್‌ಗಳಾದ ಬೋಪಣ್ಣ, ಶಶಿಕುಮಾರ್, ಮಹೇಶ್, ನಿಶಾ, ಉಷಾ, ಸಿಬ್ಬಂದಿಗಳಾದ ಶೋನಿ, ಪೂರ್ಣಿಮ, ತೇಜಸ್ವಿನಿ ಇತರರು ಸಾರ್ವಜನಿಕರು ಉಪಸ್ಥಿತ ರಿದ್ದರು. ಇನ್ಸ್ಪೆಕ್ಟರ್ ಪರಶಿವಮೂರ್ತಿ ಸ್ವಾಗತಿಸಿ, ವಂದಿಸಿದರು.