ವೀರಾಜಪೇಟೆ, ಮೇ ೧೬: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಧ್ಯೇಯದೊಂದಿಗೆ ಮೂರ್ನಾಡಿನ ಎಂ. ಬಾಡಗದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.
ಬಾಡಗ ಸ್ಪೋರ್ಟ್ಸ ಕ್ಲಬ್ ಅಧ್ಯಕ್ಷ ಕಂಬೀರAಡ ಸತೀಶ್ ಮುತ್ತಪ್ಪ ಧ್ವಜಾರೋಹಣ ನೆರವೇರಿಸಿದರೆ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸುಜಾತ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ರಾಷ್ಟಿçÃಯ ಸೇವಾ ಯೋಜನಾ ಘಟಕದ ಅಧಿಕಾರಿ ಕಿಗ್ಗಾಲು ಹರೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರೆ, ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಅಧ್ಯಕ್ಷೀಯ ನುಡಿಗಳಲ್ಲಿ ಶಿಬಿರದ ಉದ್ದೇಶವನ್ನು ತಿಳಿಸಿದರು.
ಕಂಬೀರAಡ ಕಿಟ್ಟು ಕಾಳಪ್ಪ, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಬಾಡಗ ದವಸ ಭಂಡಾರದ ಅಧ್ಯಕ್ಷ ಬಾರಿಯಂಡ ಸುಬ್ರಮಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಕಲ್ಪನಾ ನಿರೂಪಿಸಿದರು. ಉಪನ್ಯಾಸಕ ಸೋಮಯ್ಯ ಕೆ.ಬಿ ಸ್ವಾಗತಿಸಿದರೆ ನವೀನ್ ಎನ್. ಸಿ ವಂದಿಸಿದರು.