ಶಿವಲಿಂಗ ಪತ್ತೆಯಾದ ಸ್ಥಳವನ್ನು ಸೀಲ್ ಮಾಡಲು ಕೋರ್ಟ್ ಆದೇಶ

ವಾರಣಾಸಿ, ಮೇ ೧೬: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಹೇಳಿಕೆಯ ನಂತರ ನ್ಯಾಯಾಲಯವು ಆ ಸ್ಥಳವನ್ನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಸೀಲ್ ಮಾಡುವಂತೆ ಆದೇಶಿಸಿದೆ. ಮಸೀದಿಯ ಹಿಂದಿರುವ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಪ್ರವೇಶ ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ ನಂತರ ಮಸೀದಿ ಸಂಕೀರ್ಣದ ಚಿತ್ರೀಕರಣಕ್ಕೆ ನ್ಯಾಯಾಲಯ ಆದೇಶಿಸಿದ್ದು, ಚಿತ್ರೀಕರಣದ ಕೊನೆಯ ದಿನದಂದು ಶಿವಲಿಂಗ ಅಥವಾ ಶಿವನ ಅವಶೇಷವು ಕಂಡುಬAದಿದೆ ಎಂದು ವರದಿಯಾಗಿದೆ. ವಾರಣಾಸಿ ಸಿವಿಲ್ ನ್ಯಾಯಾಲಯವು ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು ಮತ್ತು ಕೊಳ ಸೇರಿದಂತೆ ಮಸೀದಿ ಸಂಕೀರ್ಣದ ವೀಡಿಯೊ ಮೌಲ್ಯಮಾಪನಕ್ಕೆ ಆದೇಶಿಸಿದ್ದು, ಈ ಕಾರ್ಯಕ್ಕಾಗಿ ನ್ಯಾಯಾಲಯದ ಆಯುಕ್ತರನ್ನು ನೇಮಿಸಿದೆ.

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು, ಮೇ ೧೬: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದು, ಮಂಗಳವಾರ (ಇಂದು) ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೊರಟ್ಟಿ, ಸಭಾಪತಿ ಸ್ಥಾನಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಅಲ್ಲದೆ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದರು. ವಿಧಾನ ಪರಿಷತ್ ಸಚಿವಾಲಯದ ಆಡಳಿತದಲ್ಲಿ ಪ್ರಾಮಾಣಿಕ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇನೆ. ಕಲುಷಿತವಾದ ರಾಜಕಾರಣದಲ್ಲಿ ನಮ್ಮಂತವರಿಗೆ ನೋವು ಆಗಿದೆ. ಆದರೆ ಮನಸ್ಸು ಇಲ್ಲದೆ ಇದ್ದರೂ ರಾಜಕೀಯದಲ್ಲಿ ಇರಬೇಕಾಗುತ್ತದೆ ಎಂದರು.

ಸಾವನ್ನಪ್ಪಿದ ಮಗು - ಅಂತ್ಯಕ್ರಿಯೆ ಸಂದರ್ಭ ಜೀವಂತ.!

ಸಿAಧನೂರು, ಮೇ ೧೬: ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಮಗು ಸ್ಮಶಾನದಲ್ಲಿ ಅಂತ್ಯಸAಸ್ಕಾರದ ವೇಳೆ ಜೀವಂತವಾಗಿರುವ ಘಟನೆಯೊಂದು ರಾಯಚೂರು ಜಿಲ್ಲೆಯ ತುರ್ವಿಹಾಳ ಪಟ್ಟಣದಲ್ಲಿ ನಡೆದಿದೆ. ತಾ. ೭ ರಂದು ತುರ್ವಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಈರಪ್ಪ ಅವರ ಪತ್ನಿ ಅಮರಮ್ಮ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ನವಜಾತ ಶಿಶು ರಕ್ತಹೀನತೆಯಿಂದ ಬಳಲುತ್ತಿತ್ತು. ಆಸ್ಪತ್ರೆಯಲ್ಲಿ ಸೌಲಭ್ಯದ ಕೊರತೆಯಿರುವ ಹಿನ್ನೆಲೆಯಲ್ಲಿ ವೈದ್ಯರು ದಂಪತಿಗೆ ಮಗುವನ್ನು ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ಆದರೆ ದಂಪತಿ ಮೇ ೧೦ರಂದು ನವಜಾತ ಶಿಶುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮೇ ೧೪ರವರೆಗೆ (ಶನಿವಾರ) ಮಗುವಿಗೆ ಚಿಕಿತ್ಸೆ ನೀಡಿದ ಬಳಿಕ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದರು. ವೈದ್ಯರ ಸಲಹೆಯಂತೆ ಸ್ವಗ್ರಾಮ ತುರ್ವಿಹಾಳಕ್ಕೆ ತೆಗೆದುಕೊಂಡು ಹೋಗಿ ಅಂತ್ಯಸAಸ್ಕಾರ ಮಾಡುವಾಗ ಮಗು ಬದುಕಿರುವುದು ಗೊತ್ತಾಗಿದ್ದು, ದಂಪತಿಯಲ್ಲಿ ಸಂತಸ ತಂದಿದೆ. ಸದ್ಯಕ್ಕೆ ಸಿಂಧನೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಶಿಶು ಮೃತಪಟ್ಟಿದೆ ಎಂದು ಘೋಷಿಸಿದ ವೈದ್ಯರ ಬಗ್ಗೆ ಸಂಬAಧಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪುಟಿನ್‌ಗೆ ಬ್ಲಡ್ ಕ್ಯಾನ್ಸರ್

ಕೀವ್, ಮೇ ೧೬: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ವರದಿಗಳ ನಡುವೆ, ಅವರು ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆರೋಗ್ಯ ಗಂಭೀರವಾಗಿದೆ ಎಂದು ಸೋಮವಾರ ವರದಿಗಳು ತಿಳಿಸಿವೆ. ಪುಟಿನ್ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ರಷ್ಯಾ ಅಧ್ಯಕ್ಷರೊಂದಿಗೆ ನಿಕಟ ಸಂಬAಧ ಹೊಂದಿರುವ ಹೆಸರು ಹೇಳಲು ಇಚ್ಚಿಸದ ಸರ್ಕಾರದ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಮೇ ೧೬: ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿದೆ. ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಕೆಎಸ್‌ಆರ್‌ಪಿ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರನ್ನು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ (ಪ್ರಭಾರ್) ಆಗಿದ್ದ ಆರ್. ಹಿತೇಂದ್ರ ಅವರನ್ನು ವರ್ಗಾಯಿಸಲಾಗಿದೆ. ಇನ್ನು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಅವರನ್ನು ಸಿಐಡಿ ಎಸ್‌ಪಿಯಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಇನ್ನು ಯಾರನ್ನೂ ನೇಮಿಸಿಲ್ಲ.