ಸುAಟಿಕೊಪ್ಪ, ಮೇ ೧೬: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕಾರ್ಯಚರಿಸುತ್ತಿದ್ದ ಆ್ಯಂಬ್ಯುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಾಷ್ಟಿçÃಯ ಹೆದ್ದಾರಿ ಬಳಿಯ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ.
ಕುಶಾಲನಗರದಿಂದ ಸುಂಟಿಕೊಪ್ಪ ಕಡೆಗೆ ಇಲ್ಲಿನ ಸರಕಾರಿ ಆಸ್ಪತ್ರೆಯ ಆ್ಯಂಬ್ಯುಲೆನ್ಸ್ ವಾಹನ (ಕೆಎ೫೧-೫೨೫೯) ಕೊಡಗರಹಳ್ಳಿ ಮಾರುತಿ ನಗರದಲ್ಲಿ ರಾಷ್ಟಿçÃಯ ಹೆದ್ದಾರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಗೊಂಡು ತೋಟಕ್ಕೆ ನುಗ್ಗಿದೆ ಚಾಲಕ ಓರ್ವನೆ ವಾಹನದಲ್ಲಿದ್ದು, ವಾಹನವು ಬಹುತೇಕ ಜಖಂಗೊAಡಿದ್ದು, ಪ್ರಾಣಾಪಾಯ ದಿಂದ ಪಾರಾಗಿದ್ದಾರೆ.