ಗೋಣಿಕೊಪ್ಪಲು, ಮೇ ೧೬: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಪ್ರಾಥಮಿಕ ಆರೋಗ್ಯ ಕೇಂದ್ರ ಬಾಳೆಲೆ, ಐಶ್ವರ್ಯ ಚಾರಿಟೇಬಲ್ ಟ್ರಸ್ಟ್, ಸ್ನೇಹಾಶ್ರಯ ಯೂತ್ ಟ್ರಸ್ಟ್ ಮಡಿಕೇರಿ ಹಾಗೂ ಗ್ರಾಮ ಪಂಚಾಯಿತಿ ಬಾಳೆಲೆ ಇವರ ಸಂಯುಕ್ತ ಆಶ್ರಯದಲ್ಲಿ ಸೀಮಂತ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಆಸ್ಪತ್ರೆ ವ್ಯಾಪ್ತಿಯ ೫೧ ಗರ್ಭಿಣಿಯರು ಭಾಗವಹಿಸಿದ್ದರು. ಇವರುಗಳಿಗೆ ಪೌಷ್ಟಿಕಾಂಶಯುಕ್ತ ಆಹಾರಗಳ ಸೇವನೆ, ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳು, ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಮೂಲಕ ಸೀಮಂತ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗುರುಶಾಂತಪ್ಪ, ಆರಕ್ಷಕ ವೃತ್ತ ನಿರೀಕ್ಷಕ ಜಯರಾಂ, ಪೊನ್ನಂಪೇಟೆ, ಉಪ ತಹಶೀಲ್ದಾರ್ ಸೇರಿದಂತೆ ಆರೋಗ್ಯ ಸಮುದಾಯ ಕಾರ್ಯಕ್ರಮಗಳ ಪ್ರಮುಖರು, ನಿಟ್ಟೂರು ಗ್ರಾ.ಪಂ. ಅಧ್ಯಕ್ಷ ಚೆಕ್ಕೆರ ಸೂರ್ಯ ಅಯ್ಯಪ್ಪ, ಬಾಳೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಕೇಶ್ ಹಾಗೂ ಉಪಾಧ್ಯಕ್ಷರು, ಪಂಚಾಯಿತಿ ಸದಸ್ಯರು, ಐಶ್ವರ್ಯ ಚಾರಿಟೇಬಲ್ ಟ್ರಸ್ಟ್ನ ಮುಖ್ಯ ಆಡಳಿತಾಧಿಕಾರಿಗಳು, ಬಾಳೆಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆ ಯರು ಉಪಸ್ಥಿತರಿದ್ದರು.