ಸೋಮವಾರಪೇಟೆ, ಮೇ ೧೫: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮತ್ತು ಬಾಲಭವನ ಸೊಸೈಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಳೆದ ೮ ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ತಾಲೂಕು ಸ್ತಿçà ಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಸಿ.ಎಂ. ಅಣ್ಣಯ್ಯ ವಹಿಸಿದ್ದರು. ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲೂಕು ಬಿಸಿಎಂ ವಿಸ್ತರಣಾಧಿಕಾರಿ ಸ್ವಾಮಿ, ಮೇಲ್ವಿಚಾರಕರಾದ ಗುರುಬಸಮ್ಮ, ಸಾವಿತ್ರಮ್ಮ ಇದ್ದರು.
ಮಕ್ಕಳ ಸಹಾಯವಾಣಿ ಸಿಬ್ಬಂದಿ ಬಿ.ಕೆ. ಕುಮಾರಿ ಅವರು, ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಕುರಿತು ನಾಟಕ ಪ್ರದರ್ಶಿಸಿದರು. ಶಿಬಿರದಲ್ಲಿ ೫ ವರ್ಷದಿಂದ ೧೬ ವರ್ಷದವರೆಗಿನ ಮಕ್ಕಳು ಪಾಲ್ಗೊಂಡಿದ್ದರು.