ಮಡಿಕೇರಿ, ಮೇ ೧೬: ಹಲವು ದಿನಗಳ ರಜೆಯ ಬಳಿಕ ಇಂದು ಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಪುನರಾರಂಭ ಗೊಂಡವು. ವಿವಿಧ ಶಾಲೆಗಳಲ್ಲಿ ಶಿಕ್ಷಕರುಗಳು ವಿದ್ಯಾರ್ಥಿಗಳಿಗೆ ಹೂ, ಪುಸ್ತಕಗಳನ್ನು ನೀಡುವ ಮೂಲಕ ಸ್ವಾಗತಿಸಿ ಬರಮಾಡಿಕೊಂಡರು.ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿಯೂ ಸಹ ನಗರಸಭೆ ಶಾಲೆಗಳು, ಖಾಸಗಿ ಶಾಲೆಗಳಲ್ಲಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿವೃಂದವನ್ನು ಶಿಕ್ಷಕರುಗಳು ಆತ್ಮೀಯವಾಗಿ ಬರಮಾಡಿಕೊಂಡರು. ಜಿಲ್ಲೆಯಾದ್ಯಂತ ಶಾಲೆಗಳು ಆರಂಭವಾಗಿದ್ದರೂ ಕೂಡ ಮೊದಲ ದಿನ ಮಕ್ಕಳ ಹಾಜರಾತಿಯಲ್ಲಿ ಕುಂಠಿತ ಕಂಡು ಬಂತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ವೇದಮೂರ್ತಿ ಅವರು ಮಡಿಕೇರಿ, ಸುಂಟಿಕೊಪ್ಪ ಸೇರಿದಂತೆ ವಿವಿಧೆಡೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ

ನಡೆಸಿದರು. ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.ವೀರಾಜಪೇಟೆ: ವೀರಾಜಪೇಟೆ ತಾಲೂಕಿನ ಹಲವು ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪೋಷಕರು, ಎಸ್.ಡಿ.ಎಂ.ಸಿ, ಸದಸ್ಯರುಗಳು ಹೂವು, ಚಾಕೋಲೇಟ್ ಮತ್ತು ತಲೆಗೆ ಧರಿಸಲು ಟೋಪಿ ನೀಡುವ ಮೂಲಕ ಮಕ್ಕಳನ್ನು ಬರಮಾಡಿಕೊಂಡರು. ಮಧ್ಯಾಹ್ನದ ಊಟದೊಂದಿಗೆ ಬಹುತೇಕ ಶಾಲೆಗಳಲ್ಲಿ ಪಾಯಸವನ್ನು ನೀಡಲಾಯಿತು. ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮಕ್ಕಳಿಗೆ ಒಳಾಂಗಣ ಕ್ರೀಡೆಗಳನ್ನು ಏರ್ಪಡಿಸಿ ಗೆದ್ದವರಿಗೆ ಬಹುಮಾನವನ್ನು ನೀಡಲಾಯಿತು.

ಗೋಣಿಕೊಪ್ಪಲು: ಹಲವು ದಿನಗಳ ಬಳಿಕ ಶಾಲಾ ವಿದ್ಯಾರ್ಥಿಗಳು ಮನೆಯಿಂದ ತಮ್ಮ ಶಾಲೆಯತ್ತ ಹೆಜ್ಜೆ ಹಾಕಿದರು. ಈ ವೇಳೆ ವಿದ್ಯಾರ್ಥಿಗಳ ಆಗಮನಕ್ಕೆ ಮಳೆರಾಯ ಶುಭ ಕೋರಿದಂತಿತ್ತು. ಮುಂಜಾನೆಯಿAದಲೇ ಮೋಡ ಮುಸುಕಿದ ವಾತಾವರಣದಲ್ಲಿ ಮಳೆಯು ಸುರಿಯಲಾರಂಭಿಸಿತ್ತು. ವಿದ್ಯಾರ್ಥಿಗಳು ಮಳೆಯನ್ನು ಲೆಕ್ಕಿಸದೆ ಲವಲವಿಕೆಯಿಂದ ತಮ್ಮ ಶಾಲೆಯ ಸಮವಸ್ತçಗಳನ್ನು ಧರಿಸಿ ಶಾಲೆಯತ್ತ ಹೆಜ್ಜೆ ಹಾಕಿದರು. ಶಾಲೆಯ ಆವರಣವೂ ತಳಿರು ತೋರಣಗಳಿಂದ ಸಿಂಗಾರಗೊAಡು ಮಕ್ಕಳ ಆಗಮನಕ್ಕಾಗಿ ಎದುರು ನೋಡುತಿತ್ತು.

ವಿದ್ಯಾರ್ಥಿಗಳು ಗುಂಪು ಗುಂಪಾಗಿ ಸ್ನೇಹಿತರೊಡಗೂಡಿ ವಿಚಾರ ವಿನಿಮಯ ಮಾಡಿಕೊಂಡು ಶಾಲೆಯ ಮುಖ್ಯದ್ವಾರದ ಬಳಿ ತೆರಳುತ್ತಿದ್ದಂತೆಯೇ ಅಲ್ಲಿನ ಶಿಕ್ಷಕರು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳು ಮಕ್ಕಳನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಂಡರು. ಗೋಣಿಕೊಪ್ಪ ಸರ್ಕಾರಿ ಪ್ರೌಢಶಾಲೆಗೆ ಮುಂಜಾನೆಯೇ ಆಗಮಿಸಿದ ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಬಿಳಗಿಯವರು ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಈ ವೇಳೆ ಗೋಣಿಕೊಪ್ಪ ಗ್ರಾಮಪಂಚಾಯಿತಿಯ ಸದಸ್ಯರಾದ ಕೊಣಿಯಂಡ ಬೋಜಮ್ಮ ಹಾಗೂ ಮುಖ್ಯೋಪಾಧ್ಯಾಯರು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.ಚೆಟ್ಟಳ್ಳಿ : ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೆಟ್ಟಳ್ಳಿಯಲ್ಲಿ ಶಾಲಾ ಮಕ್ಕಳಿಗೆ ಹೂ ಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮಕ್ಕಳ ಪೋಷಕರು ಶಾಲಾ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು. ನಂತರದಲ್ಲಿ ಸಿಹಿ ವಿತರಿಸಲಾಯಿತು.

ಕೊಂಡAಗೇರಿ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಹೂಗಳನ್ನು ನೀಡಿ ತರಗತಿಗಳಿಗೆ ಸ್ವಾಗತಿಸಲಾಯಿತು. ಈ ಸಂದರ್ಭ ಶಾಲಾಭಿವೃದ್ಧಿ ಸಂಘದ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಹಾಜರಿದ್ದರು.

ಬಾಳೆಲೆ : ಬಾಳೆಲೆ ವಿಜಯಲಕ್ಷಿö್ಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕಗಳನ್ನು ಬಾಳೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೋಡಮಾಡ ಸುಕೇಶ್ ಭೀಮಯ್ಯ ವಿತರಿಸಿದರು. ಮಕ್ಕಳು ಶೈಕ್ಷಣಿಕ ವರ್ಷದಲ್ಲಿ ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು, ಬಾಳೆಲೆ ವಿದ್ಯಾಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಉಪಾಧ್ಯಕ್ಷರಾದ ಕೆ. ರಾಜ, ಕಿರುದಂಡ ದೇವಯ್ಯ, ನಿರ್ದೇಶಕ ಕಾಟಿಮಾಡ ಶರೀಣ್ ಮುತ್ತಣ್ಣ, ಅಳಮೇಂಗಡ ಸುರೇಶ್ ಸುಬ್ಬಯ್ಯ, ಮುಖ್ಯ ಶಿಕ್ಷಕರಾದ ಚಂದ್ರಶೇಖರ್, ಮತ್ತು ಅಧ್ಯಾಪಕ ವೃಂದ ಹಾಜರಿದ್ದರು.

ಸೋಮವಾರಪೇಟೆ: ತಾಲೂಕಿನಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಇಂದಿನಿAದ ಆರಂಭಗೊAಡಿದ್ದು, ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಪ್ರಮುಖರು ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ, ಸಿಹಿ ವಿತರಿಸಿ ಸ್ವಾಗತ ಕೋರಿದರು. ವಿದ್ಯಾರ್ಥಿಗಳ ಸ್ವಾಗತಕ್ಕಾಗಿ ಶಾಲಾ ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಹೂವು ನೀಡಿ ನಗುಮುಖದಿಂದ ಸ್ವಾಗತಿಸಲಾಯಿತು.

ಶೈಕ್ಷಣಿಕ ಚಟುವಟಿಕೆ ನಡೆಸಲು ಅನುಕೂಲವಾಗುವಂತೆ ಶಾಲಾ ವಾತಾವರಣ ನಿರ್ಮಿಸಲಾಗಿದ್ದು, ಕೊಠಡಿ ಹಾಗೂ ಶಾಲಾ ಆವರಣ ಸ್ವಚ್ಛಗೊಳಿಸಲಾಗಿತ್ತು. ಇದರೊಂದಿಗೆ ಮುಂದಿನ ೧೪ ದಿನಗಳ ಕಾಲ ಮಳೆಬಿಲ್ಲು ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳು ಶಾಲಾ ವಾತಾವರಣಕ್ಕೆ ಹೊಂದಿಕೊಳ್ಳಲು ಅನುಕೂಲ ಕಲ್ಪಿಸುವಂತಹ ಕಾರ್ಯಯೋಜನೆಗಳನ್ನು ಅಳವಡಿಸಲು ಶಿಕ್ಷಕ ವೃಂದ ಸಿದ್ಧತೆ ಕೈಗೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ತಿಳಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಅವರು ಕುಶಾಲನಗರ, ಕೂಡಿಗೆ ಸೇರಿದಂತೆ ಸುತ್ತಮುತ್ತಲ ಶಾಲೆಗಳಿಗೆ ತೆರಳಿ ಶಾಲಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದರಲ್ಲದೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದರು. (ಮುಂದುವರಿಯುವುದು)ಕೂಡಿಗೆ : ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ.ಸದಸ್ಯರು, ಹಿರಿಯ ವಿದ್ಯಾರ್ಥಿಗಳು ಜತೆಗೂಡಿ ಸಿಹಿ ಮತ್ತು ವಿಜ್ಞಾನ ಪುಸ್ತಕ ನೀಡುವ ಮೂಲಕ ಸ್ವಾಗತಿಸಿದರು.

ಪ್ರೌಢಶಾಲಾ ಆವರಣದಲ್ಲಿ ನಡೆದ ಮಕ್ಕಳ ಸ್ವಾಗತ ಕಾರ್ಯಕ್ರಮದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಮಕ್ಕಳಿಗೆ ಸಿಹಿ ನೀಡಿ ಶಾಲೆಗೆ ಬರಮಾಡಿಕೊಂಡರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಮಕ್ಕಳಿಗೆ ವಿಜ್ಞಾನ ಪುಸ್ತಕ ನೀಡಿದರೆ, ಎಸ್.ಡಿ.ಎಂ.ಸಿ.ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ ಗಿಡ ನೀಡಿ ಸ್ವಾಗತಿಸಿದರು.

ಗ್ರಾ.ಪಂ.ಅಧ್ಯಕ್ಷೆ ಇಂದಿರಾ ರಮೇಶ್ ಮಾತನಾಡಿ, ಶಾಲೆಯಲ್ಲಿ ಮಕ್ಕಳು ಉತ್ತಮ ಕಲಿಕೆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಪ್ರೌಢಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪುಟ್ಟಸ್ವಾಮಿ, ಸದಸ್ಯ ಜವರಯ್ಯ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ರೇವಣ್ಣ, ಸದಸ್ಯರಾದ ಗಿರಿಪ್ರಸಾದ್, ಸುಮಿತ್ರ, ಸುಮತಿ, ಪ್ರೌಢಶಾಲಾ ಹಿರಿಯ ಶಿಕ್ಷಕ ಕೆ.ಗೋಪಾಲಕೃಷ್ಣ, ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು. ನಂತರ ಪ್ರೌಢಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಪೊನ್ನಂಪೇಟೆ: ಪೊನ್ನಂಪೇಟೆ ಕ್ಲಸ್ಟರ್‌ನ ನಡಿಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಸದಸ್ಯರು, ಪೋಷಕರು, ದಾನಿಗಳು, ಮಕ್ಕಳಿಗೆ ಸಿಹಿ ಹಾಗೂ ನೋಟ್ಸ್ ವಿತರಿಸಿ ಮಕ್ಕಳನ್ನು ಬರಮಾಡಿಕೊಂಡರು. ಕಲಿಕಾ ಚೇತರಿಕೆ ಬಗ್ಗೆ ಪೋಷಕರ ಸಭೆ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣ ಗಳಿಂದ ಸಿಂಗರಿಸಲಾಗಿತ್ತು.

ಪೊನ್ನAಪೇಟೆ: ಮುಂಜಾನೆಯಿAದಲೇ ಸುರಿಯುತ್ತಿದ್ದ ಮಳೆಯ ನಡುವೆಯೂ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳು ಆಗಮಿಸಿದರು. ಶಾಲಾ ಪ್ರವೇಶ ದ್ವಾರವನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳ ಆಗಮನಕ್ಕಾಗಿ ಕಾಯುತ್ತಿದ್ದ ಶಿಕ್ಷಕ ವೃಂದ ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಬರಮಾಡಿಕೊಂಡಿತು. ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿಯವರು ಮಕ್ಕಳಿಗೆ ಸಿಹಿ ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಿದರು.

ಈ ಸಂದರ್ಭ ಮುಖ್ಯ ಶಿಕ್ಷಕ ಬಿ ಎಂ ವಿಜಯ್, ಗ್ರಾಮ ಪಂಚಾಯಿತಿ ಸದಸ್ಯ ರಾಮಕೃಷ್ಣ, ಎಸ್ ಡಿ ಎಂ ಸಿ ಸಮಿತಿಯವರು, ಶಿಕ್ಷಕರಾದ ಜಾನ್ಸಿ, ರೋಸಿ, ನಿಂಗರಾಜು,ಮಹೇಶ್, ವಿನಿತ, ಶಕೀಲಾಬಾನು, ಗಂಗಾಮಣಿ, ಮಂಗಳಾಠಗಿ, ರೀನಾ, ಮಂಗಳಮ್ಮ, ಕವಿತ, ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಾಡ ಜೀವನ್ ಹಾಜರಿದ್ದರು.