ಗೋಣಿಕೊಪ್ಪಲು, ಮೇ ೧೬: ತಾ. ೪ರಂದು ೬೦ಕ್ಕೂ ಹೆಚ್ಚಿನ ಆದಿವಾಸಿ ಕುಟುಂಬಗಳು ಹೆಚ್.ಡಿ.ಕೋಟೆಯ ಮಾಸ್ತಿಗುಡಿ ಪುನರ್ವಸತಿ ಕೇಂದ್ರದಿAದ ಆಗಮಿಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವೀರಾಜಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ರಾಜಪುರ ಸಮೀಪದ ಅಡುಗುಂಡಿ ಅರಣ್ಯ ಪ್ರದೇಶದ ಗೇಟ್ ಬಳಿ ಪ್ರತಿಭಟನೆ ಆರಂಭಿಸಿ ೮ ದಿನಗಳು ಕಳೆದಿವೆ.
ಕಳೆದ ೨ ದಿನಗಳಿಂದ ಸುರಿಯು ತ್ತಿರುವ ಮಳೆ ಹಾಗೂ ಗಾಳಿಯನ್ನು ಲೆಕ್ಕಿಸದೆ ಮಹಿಳೆಯರು, ಮಕ್ಕಳಾದಿಯಾಗಿ ಪ್ರತಿಭಟನೆ ಮುಂದುವರೆಸುತ್ತಿದ್ದಾರೆ. ವಿಪರೀತ ಮಳೆ ಬೀಳುತ್ತಿರುವ ಹಿನೆÀ್ನಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನೆಯನ್ನು ಕೈಬಿಡುವಂತೆ ಹೋರಾಟಗಾರರನ್ನು ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಮುಂದುವರೆಸುತ್ತಿದ್ದಾರೆ.
ತಮ್ಮ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಹೋರಾಟದ ಮುಂದಾಳತ್ವ ವಹಿಸಿರುವ ಜೇನು ಕುರುಬರ ಅಯ್ಯಪ್ಪ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಕೊರೆಯುವ ಚಳಿ, ಗಾಳಿಯ ನಡುವೆ ಸ್ಥಳದಲ್ಲಿಯೇ ಮಹಿಳೆಯರು ಅಡುಗೆ ಮಾಡುತ್ತಾ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಸ್ಥಳದಲ್ಲಿಯೇ ತಮ್ಮ ಮಕ್ಕಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ವಿಪರೀತ ಮಳೆ ಸುರಿಯುತ್ತಿರುವ ಹಿನೆÀ್ನಲೆಯಲ್ಲಿ ಆದಿವಾಸಿಗಳು ಪ್ರತಿಭಟನೆ ನಡೆಸಲು ಅನುಕೂಲ ವಾಗುವಂತೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಡುವಂತೆ ಕಾರವಾರದ ವಿಧಾನಪರಿಷತ್ ಸದಸ್ಯ ಶಾಂತರಾಮ್ ಸಿದ್ದಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿ ದ್ದರು. ಆದರೆ ಜನಪ್ರತಿನಿಧಿಗಳ ಮಾತಿಗೆ ಅಧಿಕಾರಿಗಳು ಇನ್ನೂ ಕೂಡ ಮನ್ನಣೆ ನೀಡದ ಬಗ್ಗೆ ಪ್ರತಿಭಟನಾ ಕಾರರಿಗೆ ಬೇಸರ ಮೂಡಿಸಿದೆ. ಸುತ್ತ ಮುತ್ತಲಿನಲ್ಲಿ ಸಿಗುವ ಗೆಡ್ಡೆ ಗೆಣಸು ಹಾಗೂ ಹಲಸಿನ ಕಾಯಿಯನ್ನು ಆಹಾರವಾಗಿ ಸೇವಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಅಸ್ವಸ್ಥಗೊಂಡು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇನುಕುರುಬರ ಸಣ್ಣಯ್ಯನವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಸ್ಥಳದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ವಿಶೇಷ ತುಕಡಿಗಳು ಮೊಖಂ ಹೂಡಿವೆ.
-ಹೆಚ್.ಕೆ.ಜಗದೀಶ್