ಮಡಿಕೇರಿ, ಮೇ ೧೫: ಪ್ರತಿ ಮಳೆಗಾಲದಲ್ಲಿ ಜಲಾವೃತಗೊಳ್ಳುವ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಜನರು ಹಾಗೂ ಭಕ್ತರ ಅನುಕೂಲಕ್ಕಾಗಿ ರೂಪಿಸಲಾದ ಮೇಲುಸೇತುವೆ ಯೋಜನೆಯನ್ನು ರಾಜ್ಯ ಬಿಜೆಪಿ ಸರಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಘಟಕಗಳ ಪ್ರಮುಖರು ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವಕ್ತಾರ ಪಿ.ಎಲ್.ಸುರೇಶ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾದ ಸುನೀಲ್ ಪತ್ರವೋ ಹಾಗೂ ಮಹಮ್ಮದ್ ಹಾರೀಸ್ ಮಾತನಾಡಿ, ಸರಕಾರದ ನಿರ್ಲಕ್ಷö್ಯದಿಂದ ಸೇತುವೆ ಕಾಮಗಾರಿ ಆಮೆನಡಿಗೆಯಲ್ಲಿ ಸಾಗುತ್ತಿದ್ದು, ಸ್ಥಳೀಯರು ಕಷ್ಟ ಅನುಭವಿಸುವಂತ್ತಾಗಿದೆ. ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಮಳೆಯಿಂದ ಕೆಸರುಮಯ ವಾತಾವರಣ ಸೃಷ್ಟಿಯಾಗಿದೆ. ಜನರು ಹಾಗೂ ಭಕ್ತರ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರವಿದ್ದಾಗ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಭಕ್ತರ ಅನುಕೂಲಕ್ಕಾಗಿ ಮೇಲುಸೇತುವೆ ಯೋಜನೆಯನ್ನು ರೂಪಿಸಿ ಹಣ ಬಿಡುಗಡೆ ಮಾಡಿಸಿದರು. ಕಾಮಗಾರಿ ಕೂಡ ಆರಂಭಗೊAಡಿತ್ತಾದರೂ ನಂತರ ಬಂದ ಬಿಜೆಪಿ ನೇತೃತ್ವದ ಸರಕಾರ ಈ ಯೋಜನೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿತು. ಜಿಲ್ಲೆಯ ಶಾಸಕರುಗಳಿಗೆ, ಉಸ್ತುವಾರಿ ಸಚಿವರಿಗೆ ಈ ಯೋಜನೆಯ ಬಗ್ಗೆ ಕಾಳಜಿ ಇಲ್ಲದಾಗಿದೆ. ಇದರ ಪರಿಣಾಮ ೫ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಅಲ್ಲದೆ ಜನರು ಹಾಗೂ ಭಕ್ತರು ಇಲ್ಲಿನ ಅವ್ಯವಸ್ಥೆಯಿಂದ ನಿತ್ಯ ಕಷ್ಟ ಅನುಭವಿಸುವಂತ್ತಾಗಿದೆ ಎಂದು ಆರೋಪಿಸಿದರು.
ಸ್ಥಳೀಯರ ಒತ್ತಾಯಕ್ಕೆ ಮಣಿದು ಜೂನ್ ಮೊದಲ ವಾರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ದೊರೆಯಿತ್ತಾದರೂ ಇಲ್ಲಿಯವರೆಗೆ ಕಾಮಗಾರಿ ವೇಗವನ್ನು ಪಡೆದುಕೊಂಡಿಲ್ಲ.
ಭಕ್ತರ ಹಿತದೃಷ್ಟಿಯಿಂದ ಉಸ್ತುವಾರಿ ಸಚಿವರು ಹಾಗೂ ಶಾಸಕರು ಹೆಚ್ಚು ಆಸಕ್ತಿ ತೋರಿ ಮೇಲು ಸೇತುವೆ ಯೋಜನೆಯನ್ನು ಪೂರ್ಣಗೊಳಿಸಲು ಕಾರ್ಯೋನ್ಮುಖರಾಗಬೇಕೆಂದು ಒತ್ತಾಯಿಸಿದರು.
ಸೀಮೆಎಣ್ಣೆ ಬೇಕು
ಕಳೆದ ೭ ತಿಂಗಳಿನಿAದ ಜಿಲ್ಲೆಯ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಿಸುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರಮುಖರು ಬೆಟ್ಟಗುಡ್ಡ ಪ್ರದೇಶವಾಗಿರುವ ಕೊಡಗಿಗೆ ತಕ್ಷಣ ಸೀಮೆಎಣ್ಣೆ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಕೊಡಗನ್ನು ಬೆಟ್ಟಗುಡ್ಡ ಪ್ರದೇಶವೆಂದು ವಿಶೇಷವಾಗಿ ಪರಿಗಣಿಸಿ ಅತ್ಯಗತ್ಯವಾಗಿ ಬೇಕಾಗಿರುವ ಆಹಾರ ಪದಾರ್ಥ ಹಾಗೂ ಪ್ರತಿ ತಿಂಗಳು ೫ ಲೀಟರ್ ಸೀಮೆಎಣ್ಣೆ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಶಾಸಕರುಗಳು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ನಾಪೋಕ್ಲು ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ ಕೊಡಗನ ತೀರ್ಥಕುಮಾರ್, ಪ್ರಧಾನ ಕಾರ್ಯದರ್ಶಿ ಬೊಳ್ಳದಂಡ ಈ ನಾಚಪ್ಪ ಹಾಗೂ ಪಕ್ಷದ ಪ್ರಮುಖ ನಾಪಂಡ ಗಣೇಶ್ ಉಪಸ್ಥಿತರಿದ್ದರು.