ಮಡಿಕೇರಿ, ಮೇ ೧೭: ರಾಷ್ಟಿçÃಯ ಡೆಂಗ್ಯು ದಿನಾಚರಣೆಯ ಅಂಗವಾಗಿ ಡೆಂಗ್ಯೂ ಜ್ವರದ ಮುಂಜಾಗ್ರತಾ ಕ್ರಮಗಳ ಬಗ್ಗೆ ‘ಡೆಂಗೀ ತಡೆಗಟ್ಟಬಹುದು. ಬನ್ನಿ ಎಲ್ಲರೂ ಕೈಜೋಡಿಸೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಜಾಥಾಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಚಾಲನೆ ನೀಡಿದರು.
ಜಾಥಾವು ನಗರದ ಬಾಲಭವನದಿಂದ ಪ್ರಾರಂಭವಾಗಿ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ವೃತ್ತದವರೆಗೆ ನಡೆಯಿತು. ಜಾಥಾದಲ್ಲಿ ಡೆಂಗ್ಯು ಜ್ವರದ ಬಗ್ಗೆ ಕರಪತ್ರ, ಭಿತ್ತಿಪತ್ರಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಇತರರು ಇದ್ದರು.