ಕುಶಾಲನಗರ, ಮೇ ೧೭: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ಕಚೇರಿಯ ಉದ್ಘಾಟನೆ ನಡೆಯಿತು.
ಕುಶಾಲನಗರ ಬೈಪಾಸ್ ರಸ್ತೆಯಲ್ಲಿರುವ ಕಟ್ಟಡದಲ್ಲಿ ಕಚೇರಿಯನ್ನು ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ. ಚಂಗಪ್ಪ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಮುದಾಯದ ಸದಸ್ಯರು ಒಗ್ಗಟ್ಟಿನ ಮೂಲಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆಯಲು ಸಾಧ್ಯ ಎಂದರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ. ದಿನೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಮುಖರಾದ ಎಂ.ಎನ್. ಕುಮಾರಪ್ಪ, ಎಂ.ಡಿ. ರಂಗಸ್ವಾಮಿ, ಉಪಾಧ್ಯಕ್ಷರಾದ ಚಂದ್ರಶೇಖರ್, ಪ್ರಕಾಶ್, ಅರುಣ್ ಕುಮಾರ್, ನಾಗೇಗೌಡ, ಜಿಲ್ಲಾ ಯುವ ವೇದಿಕೆ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ ಮತ್ತು ತಾಲೂಕು ಸಂಘದ ನಿರ್ದೇಶಕರು ಸದಸ್ಯರು ಇದ್ದರು.