ಶಿವಲಿಂಗ ರಕ್ಷಣೆ-ನಮಾಜ್ ಮಾಡಲು ಅವಕಾಶ
ನವದೆಹಲಿ, ಮೇ ೧೭: ಜ್ಞಾನವಾಪಿ ಸಮೀಕ್ಷೆಗೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ ವಾರಣಾಸಿ ಮ್ಯಾಜಿಸ್ಟೆçÃಟ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಮಸೀದಿಯ ಆವರಣದಲ್ಲಿ ಸಮೀಕ್ಷೆಯ ವೇಳೆ ಪತ್ತೆ ಯಾಗಿರುವ ಶಿವಲಿಂಗವನ್ನು ರಕ್ಷಿಸಬೇಕು ಎಂದು ಹೇಳಿದೆ. ಜ್ಞಾನವಾಪಿ ಮಸೀದಿಯಲ್ಲಿ ಮುಸ್ಲಿಮರು ನಮಾಜ್ ಸಲ್ಲಿಸಬಹುದು ಎಂದು ಕೋರ್ಟ್ ಹೇಳಿದ್ದು, ಸಿವಿಲ್ ನ್ಯಾಯಾಧೀಶರ ಹಂತದಲ್ಲಿರುವ ಉಳಿದ ಪ್ರಕ್ರಿಯೆಗಳಿಗೆ ತಡೆ ನೀಡುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ವಾರಣಾಸಿಯ ಸಿವಿಲ್ ನ್ಯಾಯಾಧೀಶರು ಗ್ಯಾನವಾಮಿ ಮಸೀದಿಗೆ ಸಂಬAಧಿಸಿದ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ವೀಡಿಯೋಗ್ರಫಿ ನಡೆಸಲು ಕೋರಿ ಅರ್ಜಿ ಸಲ್ಲಿಸಿದ್ದ ಹಿಂದೂ ಭಕ್ತಾದಿಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಗೊಳಿಸಿದ್ದು, ಮಸೀದಿ ಸಮಿತಿಯ ಅರ್ಜಿಯ ವಿಚಾರಣೆಯನ್ನು ತಾ. ೧೯ಕ್ಕೆ ಮುಂದೂಡಿದೆ.
ಅಜಯ್ ಮಿಶ್ರಾ ವಜಾ-ವರದಿ ಸಲ್ಲಿಕೆಗೆ ಅವಕಾಶ ವಿಸ್ತರಣೆ
ವಾರಾಣಸಿ, ಮೇ ೧೭: ಬಾಬರಿ ಮಸೀದಿ ಪ್ರಕರಣದ ಬಳಿಕ ಅಷ್ಟೇ ಕುತೂಹಲ ಕೆರಳಿಸಿರುವ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬAಧಿಸಿದAತೆ ವಾರಣಾಸಿ ಕೋರ್ಟ್ ಅಡ್ವೊಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ. ವಿವಾದಿತ ಮಸೀದಿಯ ವೀಡಿಯೋ ಚಿತ್ರೀಕರಣ ಮತ್ತು ಸಮೀಕ್ಷೆಗೆ ಆದೇಶ ನೀಡಿದ್ದ ವಾರಣಾಸಿಯ ನ್ಯಾಯಾಲಯವು ಮಂಗಳವಾರ ಅಸಹಕಾರದ ಆಧಾರದ ಮೇಲೆ ಅಡ್ವೊಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದ್ದು, ಸಮೀಕ್ಷಾ ವರದಿ ಸಲ್ಲಿಸಲು ಆಯೋಗಕ್ಕೆ ನ್ಯಾಯಾಲಯ ಇನ್ನೆರಡು ದಿನಗಳ ಕಾಲಾವಕಾಶವನ್ನೂ ನೀಡಿದೆ. ಈ ಹಿಂದೆ ಮೇ ೧೭ರ ಒಳಗೆ ವರದಿ ನೀಡಬೇಕು ಎಂದು ಕೋರ್ಟ್ ಹೇಳಿತ್ತು. ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯವು ವಜಾಗೊಳಿಸಿದೆ ಎಂದು ಸಹಾಯಕ ವಕೀಲ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ಸುದ್ದಿಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ. ಅಸಹಕಾರದ ಆಧಾರದ ಮೇಲೆ ಮಿಶ್ರಾ ಅವರನ್ನು ತೆಗೆದುಹಾಕಲಾಗಿದ್ದು, ಅಜಯ್ ಮಿಶ್ರಾ ಅವರು ಸಮೀಕ್ಷೆಗೆ ಸಂಬAಧಿಸಿದ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು ಎಂದು ಕೆಲ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಈ ಹಿಂದೆ ಅಜಯ್ ಕುಮಾರ್ ಮಿಶ್ರಾ ಅವರನ್ನು ಅಡ್ವೊಕೇಟ್ ಕಮಿಷನರ್ ಸ್ಥಾನದಿಂದ ಕೈಬಿಡಬೇಕು ಎಂದು ಕೋರಿದ್ದ ಮುಸಲ್ಮಾನರ ಅರ್ಜಿಯನ್ನು ಇದೇ ಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ, ಮಿಶ್ರಾ ಅವರಿಗೆ ನೆರವಾಗಲು ಹೆಚ್ಚುವರಿ ಕಮಿಷನರ್ ಮತ್ತು ಸಹಾಯಕ ಕಮಿಷನರ್ ಅವರನ್ನು ಕೋರ್ಟ್ ನೇಮಕ ಮಾಡಿತ್ತು.
ಕಾಸ್ಮೆಟಿಕ್ ಸರ್ಜರಿಯಿಂದ ನಟಿ ಸಾವು ಆರೋಪ
ಬೆಂಗಳೂರು, ಮೇ ೧೭: ಬೆಂಗಳೂರಿನ ರಾಜಾಜಿನಗರದಲ್ಲಿರುವ ಡಾ.ಶೆಟ್ಟಿ ಸೌಂದರ್ಯವರ್ಧಕ ಚಿಕಿತ್ಸಾಲಯದಲ್ಲಿ ಸೋಮವಾರ ೨೨ ವರ್ಷದ ಕನ್ನಡದ ಕಿರುತೆರೆ ನಟಿಯೊಬ್ಬರು ‘ಫ್ಯಾಟ್ ಮುಕ್ತ’ ಕಾಸ್ಮೆಟಿಕ್ ಸರ್ಜರಿ ವೇಳೆ ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಮಂಗಳವಾರ ಕ್ಲಿನಿಕ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನಟಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಸುಬ್ರಹ್ಮಣ್ಯನಗರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ನಟಿ ಚಿಕ್ಕಬಾಣಾವರ ನಿವಾಸಿ ಚೇತನಾ ರಾಜ್ ಎಂದು ಗುರುತಿಸಲಾಗಿದ್ದು, ಇವರು ಕನ್ನಡದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಉದ್ಯಮಿಯಾಗಿರುವ ದೂರುದಾರ, ನಟಿ ತಂದೆ ವರದರಾಜು ಅವರು ಶುಕ್ರವಾರ ಬೆಳಿಗ್ಗೆ ತಮ್ಮ ಮಗಳು ಚೇತನಾ ಅವರು ಕ್ಲಿನಿಕ್‌ಗೆ ಬಂದಿದ್ದರು. ಆಕೆಯ ಸೊಂಟದ ಮೇಲಿನ ಫ್ಯಾಟ್ ತೆಗೆದುಹಾಕಲು ಶಸ್ತçಚಿಕಿತ್ಸೆಗೆ ಒಳಗಾ ಗುವಂತೆ ವೈದ್ಯರು ಒತ್ತಾಯಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಆಕೆಯನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿಲ್ಲ ಎಂದು ಆರೋಪಿಸಿದ್ದಾರೆ. ಶಸ್ತçಚಿಕಿತ್ಸೆಗೆ ಮುನ್ನ ವೈದ್ಯರು ಪೋಷಕರಿಂದ ಯಾವುದೇ ಅನುಮತಿ ಪಡೆದಿಲ್ಲ. ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಕ್ಲಿನಿಕ್ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲು ಮರಣೋತ್ತರ ಪರೀಕ್ಷೆಯ ವರದಿಯನ್ನು ವೈದ್ಯಕೀಯ ಮಂಡಳಿಗೆ ಕಳುಹಿಸುತ್ತೇವೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್
ಬೆಂಗಳೂರು, ಮೇ ೧೭: ಬಿಜೆಪಿ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ತಾವರ್‌ಚೆಂದ್ ಗೆಲ್ಹೋಟ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ರಘುನಾಥ್ ರಾವ್ ಮಲ್ಕಾಪುರೆ ಅವರು ಇಂದು ವಿಧಾನಸೌಧದ ಕೊಠಡಿ ಸಂಖ್ಯೆ ೧೧೭ರಲ್ಲಿ ಹಂಗಾಮಿ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಿಯಮಾವಳಿಗಳ ಪ್ರಕಾರ ಸಭಾಪತಿ ತಮ್ಮ ರಾಜೀನಾಮೆಯನ್ನು ಉಪಸಭಾಪತಿಗೆ ನೀಡಬೇಕಾಗುತ್ತದೆ. ಸದ್ಯ ಉಪಸಭಾಪತಿ ಸ್ಥಾನವೂ ಖಾಲಿ ಇದೆ. ಈ ಕಾರಣದಿಂದ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಈಗ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿರುವುದರಿಂದ ಹೊರಟ್ಟಿ ಅವರ ರಾಜೀನಾಮೆ ಅಂಗೀಕರಿಸಲು ಸುಗಮವಾಗುತ್ತದೆ. ರಘುನಾಥ್ ರಾವ್ ಮಲ್ಕಾಪುರೆ ಅವರು ಅಧಿಕಾರ ವಹಿಸಿಕೊಂಡ ಬಳಿಕ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿದರು.
ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನ ಸಭೆಯಿಂದ ಅಂಗೀಕಾರ
ಬೆAಗಳೂರು, ಮೇ ೧೭: ಮತಾಂತರ ನಿಷೇಧ ಕಾಯಿದೆ ಯಾವುದೇ ಧರ್ಮದ ವಿರುದ್ಧ ರೂಪಿತವಾಗಿಲ್ಲ. ಆದರೆ ಯಾವುದೇ ರೀತಿಯ ಆಮಿಷ ಅಥವಾ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಸಚಿವರು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾದ ಮತಾಂತರ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಸಭೆಯಿಂದ ಅಂಗೀಕಾರ ಪಡೆಯಲಾಗಿದೆ. ಮೇಲ್ಮನೆಯಲ್ಲಿ ಮಂಡಿತವಾಗಿರುವ ಮಸೂದೆಗೆ ಮುಂದಿನ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದ ಸಚಿವರು, ಪ್ರಸಕ್ತ ಸರಕಾರವು ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಮ್ಮತಿ ನಿರೀಕ್ಷಿಸಿದ್ದೇವೆ ಎಂದರು. ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿದ ಸಚಿವರು, ಸಮಾಜದಲ್ಲಿ ಶಾಂತಿ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.