ಮಡಿಕೇರಿ, ಮೇ ೧೭: ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೊಡಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಮಕ್ಕಳ ಸಹಾಯವಾಣಿ ೧೦೯೮ ಕುರಿತು ಹೊರತಂದಿರುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
ಜಿ.ಪಂ. ಸಿಇಒ ಭಂವರ್ಸಿAಗ್ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅರುಂಧತಿ ಇದ್ದರು.