ಮಡಿಕೇರಿ, ಮೇ ೧೮: ಪೊನ್ನಂಪೇಟೆಯಲ್ಲಿ ನಡೆದಿರುವ ತ್ರಿಶೂಲ ದೀಕ್ಷೆ ಮತ್ತು ಏರ್‌ಗನ್ ತರಬೇತಿ ಪ್ರಕರಣ ಖಂಡನೀಯವೆAದು ಹೇಳಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ತನಿಖೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಾಲೆ ಎನ್ನುವುದು ಒಂದು ಜ್ಞಾನ ದೇಗುಲವಿದ್ದಂತೆ, ಎಲ್ಲಾ ಜಾತಿ, ಧರ್ಮದ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಪವಿತ್ರ ಸ್ಥಳದಲ್ಲಿ ಪ್ರಚೋದನಾಕಾರಿ ಚಟುವಟಿಕೆಗಳಿಗೆ ಅವಕಾಶ ನೀಡಿರುವುದು ಸರಿಯಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಯಾರ ಒತ್ತಡಕ್ಕೂ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ತಪ್ಪು ಮಾಡುವವರಿಗೆ ಎಚ್ಚರಿಕೆಯ ಗಂಟೆಯಾಗಬೇಕು ಎಂದು ಉಸ್ಮಾನ್ ತಿಳಿಸಿದ್ದಾರೆ.