ಮಡಿಕೇರಿ, ಮೇ ೧೭: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶದಲ್ಲಿ ಮತ್ತು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದಲ್ಲಿರುವ ಸಂಸ್ಥೆ ಉದ್ದಿಮೆಗಳ ಎಲ್ಲಾ ನೇಮಕಾತಿಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್ ಅವರ ಏಕ ಸದಸ್ಯ ಆಯೋಗದ ವರದಿಯನ್ನು ಜಾರಿಗೊಳಿಸಬೇಕೆಂದು ಕೊಡಗು ಜಿಲ್ಲಾ ವಾಲ್ಮಿಕಿ ನಾಯಕ ಕ್ಷೇಮಾ ಭಿವೃದ್ಧಿ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರುಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕರ್ನಾಟಕ ಸರ್ಕಾರ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. ೩ ರಿಂದ ಶೇ. ೭.೫ ಹಾಗೂ ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣವನ್ನು ಶೇ. ೧೫ ರಿಂದ ಶೇ. ೧೭.೫ಕ್ಕೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆ.ಎನ್. ಅಶೋಕ್, ವೀರಾಜಪೇಟೆ ಘಟಕದ ಅಧ್ಯಕ್ಷ ಪಿ.ಟಿ. ಸುರೇಶ್, ಪ್ರಧಾನ ಕಾರ್ಯದರ್ಶಿ ಪರಮೇಶ್, ಬಿಎಸ್‌ಪಿ ಜಿಲ್ಲಾಧ್ಯಕ್ಷ ವಿ. ಸಿದ್ದಪ್ಪ, ಉಸ್ತುವಾರಿ ಜಯಪ್ಪ ಹಾನಗಲ್, ಸ್ವಾಮಿ ಉಪಸ್ಥಿತರಿದ್ದರು.