ಮಡಿಕೇರಿ, ಮೇ 19: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ನೌಕರರ ಇಲಾಖಾ ವಿಚಾರಣೆಗಳಿಗೆ ಸಂಬಂಧಿಸಿದಂತೆ, ಜಿಲ್ಲಾಡಳಿತವು ತಾ. 20 ರಂದು (ಇಂದು) ಬೆಳಿಗ್ಗೆ 10 ಗಂಟೆಯಿಂದ ಸರ್ಕಾರಿ ನೌಕರರ ಮೇಲಿನ ಆಪಾದಿತ ದುರ್ನಡತೆಗೆ ಸಂಬಂಧಿಸಿದಂತೆ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ, ಮತ್ತು ಮೇಲ್ಮನವಿ) ನಿಯಮಗಳು, 1957ರಡಿ ಶಿಸ್ತಿನ ಕ್ರಮ ಕೈಗೊಳ್ಳುವಲ್ಲಿ ನೌಕರರ ವಿರುದ್ಧದ ಇಲಾಖಾ ವಿಚಾರಣೆಯಲ್ಲಿನ ವಿಳಂಬವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ದಿನದ ಇಲಾಖಾ ವಿಚಾರಣಾ ಕಾರ್ಯಾಗಾರವು ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಜಿಲ್ಲಾ ತರಬೇತಿ ಸಂಸ್ಥೆ (ಪ್ರವಾಸೋಧ್ಯಮ ಇಲಾಖೆಯ ಮೊದಲನೇ ಮಹಡಿ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ)ಯಲ್ಲಿ ನಡೆಯಲಿದೆ ಎಂದು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೆ.ವಿ. ಶಿವರಾಮಯ್ಯ ತಿಳಿಸಿದ್ದಾರೆ.