ಕೂಡಿಗೆ, ಮೇ 19: ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಜಲಜೀವನ್ ಯೋಜನೆ ಅಡಿಯಲ್ಲಿ ಜಲಮೂಲ ಜಾಗೃತಿ ಆಂದೋಲನ ಕಾರ್ಯಕ್ರಮವು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಜಾಗೃತಿ ಆಂದೋಲನ ಕಾರ್ಯಕ್ರಮಕ್ಕೆ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಲಜೀವನ್ ಯೋಜನೆ ತರಬೇತಿಯನ್ನು ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ನೀಡಲಾಯಿತು. ಜಲಜೀವನ್ ಯೋಜನೆ ಸಂಯೋಜಕ ಜಗ್ಗೇಶ್ ಯೋಜನೆಗಳ ಸಂಪೂರ್ಣವಾದ ಮಾಹಿತಿ ಮತ್ತು ಸಾಧಕ ಭಾದಕಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಹಾಜರಿದ್ದ ಕೆಲ ಸದಸ್ಯರು ಜಲಜೀವನ್ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು. ಇದಕ್ಕೆ ಸಭೆಯಲ್ಲಿ ಹಾಜರಿದ್ದ ಗುತ್ತಿಗೆದಾರ ಅವುಗಳನ್ನು ಸರಿಪಡಿಸುವ ಭರವಸೆಯನ್ನು ನೀಡಿದರು.
ನಂತರ ಜಾಗೃತಿ ಆಂದೋಲನ ಅಂಗವಾಗಿ ಗ್ರಾಮ ಪಂಚಾಯಿತಿಯಿಂದ ಕೂಡಿಗೆ ಸರ್ಕಲ್ ನವರಿಗೆ ಸಾರ್ವಜನಿಕರಿಗೆ ಜಾಥಾದ ಮೂಲಕ ಮೆರವಣಿಗೆ ಸಾಗಿ ಜಲಜೀವನ್ ಕುಡಿಯುವ ನೀರಿನ ಯೋಜನೆ ಮಾಹಿತಿಯನ್ನು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅರಣುರಾವ್, ಶಿವಕುಮಾರ್, ಚಂದ್ರು, ರತ್ನಮ್ಮ, ಜಯಶೀಲಾ, ಜಯಶ್ರೀ, ಲಕ್ಷ್ಮಿ ಕಾರ್ಯದರ್ಶಿ ಬಿ.ಎಸ್. ಪುನಿತ್ ಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.