ಮಡಿಕೇರಿ, ಮೇ ೧೮: ಪಾರಿಜಾತ ಸಾಂಸ್ಕೃತಿಕ ಹಾಗೂ ಸಾಮಾಜಿಕ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಯುವಕರ ಸಂಘದ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಗೀತಗಾಯನ ಮತ್ತು ನೃತ್ಯ ಕಾರ್ಯಕ್ರಮ ಮೈಸೂರಿನ ನಾದಬ್ರಹ್ಮ ಸಂಗೀತ ಸಭಾ ವೇದಿಕೆಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ನಾಟ್ಯಮಯೂರಿ ನೃತ್ಯ ಶಾಲೆಯ ೧೫ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ರೀತಿಯ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ಸಾನಿಧ್ಯ, ಆದಿತ್ಯ, ಸಾಹಿದ, ಶ್ರಾವ್ಯ, ನವ್ಯ, ಮಿಲನ್ಯ. ಚೈತನ್ಯ, ಹರಿಸಿನಿ, ವರ್ಷಿತ, ಲಕ್ಷ, ಸಂಚಿತ ಆಚಾರ್ಯ, ಆಕಾಂಕ್ಷ, ಭಾಗ್ಯಶ್ರೀ, ಸಾನ್ವಿ ಭಾಗವಹಿಸಿ ಪುರಸ್ಕಾರ ಪಡೆದುಕೊಂಡಿದ್ದಾರೆ. ಇವರುಗಳು ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದಾರೆ.